ಮಂಡ್ಯ: ಒಂದೇ ಗ್ರಾಮದ 25ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ತಾಲೂಕು ಆಡಳಿತ ಪಾಂಡವಪುರ ತಾಲೂಕಿನ ಕೋಡಾಲ ಗ್ರಾಮಕ್ಕೆ ದಿಗ್ಬಂಧನ ಹಾಕಲಾಗಿದೆ.
ಕೋಡಾಲ ಗ್ರಾಮದ ಸುಮಾರು 25ಕ್ಕೂ ಹೆಚ್ಚಿನ ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಮುಂದಿನ 14 ದಿನಗಳ ಕಾಲ ಗ್ರಾಮದಿಂದ ಯಾರೂ ಹೊರಗೆ ಹೋಗದಂತೆ ತಾಲೂಕು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಅಲ್ಲದೆ, ಗ್ರಾಮಕ್ಕೆ ಹೊರಗಿನಿಂದ ಯಾರೂ ಬರದಂತೆ ಗ್ರಾಮವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿ ತಾಲೂಕು ಆಡಳಿತ ಆದೇಶಿಸಿದೆ. ಸದ್ಯ ಗ್ರಾಮದ ಪ್ರತಿಯೊಬ್ಬರಿಗೂ ಕೋವಿಡ್ ಟೆಸ್ಟ್ ಮಾಡಿಸುವಂತೆ ಸೂಚನೆ ನೀಡಲಾಗಿದೆ.
ಈ ಊರಲ್ಲಿ ಇನ್ನೂ ಹಲವರಿಗೆ ಕೋವಿಡ್-19 ಸೋಂಕು ಇರುವ ಶಂಕೆ ವ್ಯಕ್ತವಾಗಿರುವ ಕಾರಣ ತಪಾಸಣೆಗೆ ಒಳಗಾಗುವಂತೆ ಹೇಳಲಾಗಿದೆ. ಇದಕ್ಕೆ ಗ್ರಾಮಸ್ಥರು ನಿರಾಕರಿಸಿದ ಹಿನ್ನೆಲೆ ಇಡೀ ಗ್ರಾಮಕ್ಕೆ ದಿಗ್ಬಂಧನ ಹಾಕಲಾಗಿದೆ.
ಓದಿ: 18 ರಿಂದ 45 ವರ್ಷದೊಳಗಿನವರಿಗಾಗಿ ಹಂತ ಹಂತವಾಗಿ ಲಸಿಕೆ ಅಭಿಯಾನ; ಸಿಎಂ ಬಿಎಸ್ವೈ