ಮಂಡ್ಯ: ಜಿಲ್ಲೆಯ ಜುಬ್ಲಿಯಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ಯುವಕನಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಸೋಂಕಿತನಿಗೆ ಮಿಲ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ವರ್ಣಸಂದ್ರಕ್ಕೆ ಅಧಿಕಾರಿಗಳ ಭೇಟಿ: ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ನಂಜನಗೂಡು ಜುಬ್ಲಿಯಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದ ಸ್ವರ್ಣಸಂದ್ರದ ಯುವಕನ ಮನೆಗೆ ತಹಶೀಲ್ದಾರ್ ನಾಗೇಶ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸೋಂಕಿತನ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದು, ಹಲವರನ್ನ ಹೋಂ ಕ್ವಾರಂಟೈನ್ ಮಾಡಿ, ಕೆಲವರನ್ನು ಐಸೋಲೇಷನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ಬಫರ್ ಝೋನ್: ಸ್ವರ್ಣಸಂದ್ರ ಬಡಾವಣೆಯ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸುತ್ತಮುತ್ತಲಿನ ಪ್ರದೇಶವನ್ನ ಬಫರ್ ಝೋನ್ ಮಾಡುವ ಸಾಧ್ಯತೆ ಇದೆ.