ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ತಮ್ಮ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಶಾಸಕರು ಮನವಿ ಮಾಡಿದ್ದಾರೆ.
ಶಾಸಕ ರವೀಂದ್ರ ಶ್ರೀಕಂಠಯ್ಯ, ಅವರ ಪತ್ನಿ, ಮಾಜಿ ಶಾಸಕಿ ಮತ್ತು ರವೀಂದ್ರ ಅವರ ತಾಯಿಗೂ ಕೊರೊನಾ ತಗುಲಿದೆ.
ಶಾಸಕ ರವೀಂದ್ರ ಅವರ ತಾಯಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕರು ಹಾಗೂ ಅವರ ಪತ್ನಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.