ETV Bharat / state

ಮಂಡ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಆಕ್ಸಿಜನ್, ಬೆಡ್ ಒದಗಿಸಲು ಜಿಲ್ಲಾಡಳಿತ ಹರಸಾಹಸ

author img

By

Published : May 20, 2021, 9:38 AM IST

ಮಂಡ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಪರಿಸ್ಥಿತಿ ನಿಭಾಯಿಸುವುದು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ. ಉಸ್ತುವಾರಿ ಸಚಿವರು ಜಿಲ್ಲೆಯಾದ್ಯಂತ ಸಂಚರಿಸಿ ಸೂಕ್ತ ವ್ಯವಸ್ಥೆ ಮಾಡಿಕೊಡುವುದರಲ್ಲಿ ತೊಡಗಿದ್ದಾರೆ.

Covid cases increasing in Mandya
ಮಂಡ್ಯದಲ್ಲಿ ಕೋವಿಡ್ ಹೆಚ್ಚಳ

ಮಂಡ್ಯ : ಜಿಲ್ಲೆಯಲ್ಲಿ ಪ್ರತಿನಿತ್ಯ ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, 10 ಅಧಿಕ ಮಂದಿ ಮೃತಪಡುತ್ತಿದ್ದಾರೆ. ಈ ನಡುವೆ ಆಕ್ಸಿಜನ್, ಬೆಡ್​ ಕೊರತೆಯೂ ಎದುರಾಗಿದ್ದು, ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತ ಹರಸಾಹಸಪಡುತ್ತಿದೆ.

ಈಗಾಗಲೇ ಮಿಮ್ಸ್ ಆಸ್ಪತ್ರೆ ಸೋಂಕಿತರಿಂದ ಸಂಪೂರ್ಣ ಭರ್ತಿಯಾಗಿದೆ. ತಾಲೂಕು ಆಸ್ಪತ್ರೆಗಳ ಜೊತೆಗೆ ಆರೋಗ್ಯ ಕೇಂದ್ರಗಳನ್ನು ಕೂಡ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗಿದೆ. ಆದಿಚುಂಚನಗಿರಿ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗ್ತಿದೆ, ಆದರೂ, ಬೆಡ್​ ಸಾಕಾಗುತ್ತಿಲ್ಲ. ಹಾಗಾಗಿ, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಹಾಸಿಗೆ ಹೆಚ್ಚಿಸುವಂತೆ ಡಾ. ನಿರ್ಮಾಲಾನಂದ ಸ್ವಾಮೀಜಿಗೆ ಸಚಿವ ನಾರಾಯಣಗೌಡ ಮನವಿ ಮಾಡಿಕೊಂಡಿದ್ದಾರೆ.

ಖಾಸಗಿ ಹಾಸ್ಟೆಲ್​ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ನಾರಾಯಣಗೌಡ

ಇದನ್ನೂ ಓದಿ: ಕೋವಿಡ್: ಆಸ್ಪತ್ರೆ ಆವರಣದಲ್ಲಿ ಸೋಂಕಿತರ ಸಂಬಂಧಿಕರ ಪರದಾಟ

ಪರಿಸ್ಥಿತಿ ನಿಭಾಯಿಸಲು ಈಗಾಗಲೇ ಸಚಿವ ನಾರಾಯಣಗೌಡ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಹೋಮ್ ಐಸೋಲೇಶನ್ ಬದಲಾಗಿ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್​ಗಳಲ್ಲೇ ಚಿಕಿತ್ಸೆ ನೀಡಲು ಯೋಜಿಸಲಾಗಿದೆ. ಇದಕ್ಕಾಗಿ, ಖಾಸಗಿ ಹಾಗೂ ಸರ್ಕಾರಿ ಹಾಸ್ಟೆಲ್​ಗಳನ್ನು ಕೋವಿಡ್ ಸೆಂಟರ್ ಆಗಿ ಪರಿವರ್ತನೆ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ಗಳಿಗೆ ತೆರಳಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.