ETV Bharat / state

Mandya crime: ಐಎಎಸ್​ ಕನಸು ನನಸಾಗಲಿಲ್ಲವೆಂದು ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ!

Bank manager suicide: ತಂದೆಗೆ ಕೆರೆ ಮಾಡಿ 'ಕ್ಷಮಿಸಿ ಅಪ್ಪಾ ನಾನು ದೇವರ ಬಳಿ ಹೋಗುತ್ತಿದ್ದೇನೆ' ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡ ಶೃತಿ.

Etv Bharat
Etv Bharat
author img

By

Published : Aug 8, 2023, 5:42 PM IST

ಮಂಡ್ಯ: ಯುಪಿಎಸ್​ಸಿ ಪರೀಕ್ಷೆ ಬರೆದು ಐಎಎಸ್​ ಅಧಿಕಾರಿ ಆಗಬೇಕೆಂಬ ಕನಸು ನನಸಾಗದ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಬ್ಯಾಂಕ್​ವೊಂದರ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಕಾವೇರಿ ಗ್ರಾಮೀಣ ಬ್ಯಾಂಕ್​ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ. ಮಂಡ್ಯ ನಗರದ ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ಅವರು ವಾಸವಾಗಿದ್ದರು. ಐಎಎಸ್ ಕನಸು ಮತ್ತು ಜೀವನದ ವೈಫಲ್ಯ ಸಾವಿಗೆ ಕಾರಣ ಎಂದು ಡೆತ್ ನೋಟ್​ನಲ್ಲಿ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಳ್ಳೇಗಾಲದ ಮಲ್ಲಪ್ಪ ಎಂಬುವರ ಮಗಳಾದ ಶೃತಿ ಅವರು ಕಾವೇರಿ ಗ್ರಾಮೀಣ ಬ್ಯಾಂಕ್​ನ ಉದ್ಯೋಗಿಯಾಗಿ ನೇಮಕಗೊಂಡು ಚಿಕ್ಕಮಗಳೂರಿನ ಶಾಖೆಯಲ್ಲಿ ಕಳೆದ ಏಳು ವರ್ಷ ಕಾರ್ಯನಿರ್ವಹಿಸಿದ್ದರು. ಮಂಡ್ಯದ ಪ್ರಾದೇಶಿಕ ಕಚೇರಿಗೆ ಎರಡು ತಿಂಗಳ ಹಿಂದೆಯಷ್ಟೇ ಬಂದಿದ್ದರು. ವಿನಾಯಕ ಬಡಾವಣೆಯಲ್ಲಿನ ಮನೆಯೊಂದನ್ನು ಬಾಡಿಗೆ ಪಡೆದು ವಾಸವಾಗಿದ್ದ ಇವರು ಅವಿವಾಹಿತರಾಗಿದ್ದರು.

ತಂದೆ ಮಲ್ಲಪ್ಪ ಅವರಿಗೆ ಕರೆ ಮಾಡಿದ ಶೃತಿ, ನಾನು ದೇವರ ಬಳಿ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಅಪ್ಪಾ ಎಂದು ಹೇಳಿ ಕರೆ ಕಡಿತ ಮಾಡಿದ್ದರು. ತಕ್ಷಣ ಮಲ್ಲಪ್ಪ ಅವರು ಮತ್ತೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮಂಡ್ಯದಲ್ಲಿರುವ ಸಂಬಂಧಿಕರಿಗೆ ಮಲ್ಲಪ್ಪ ವಿಚಾರ ತಿಳಿಸಿದ್ದಾರೆ. ಅವರ ಸಂಬಂಧಿಕರು ಮನೆಯ ಬಳಿ ಹೋಗಿ ನೋಡುವಷ್ಟರಲ್ಲಿ ಶೃತಿ ಶವವಾಗಿ ಕಂಡುಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿರುವ ಶೃತಿ, ''ಐಎಎಸ್ ಕನಸು ನನಸಾಗಲಿಲ್ಲ, ಜೊತೆಗೆ ಜೀವನದಲ್ಲಿಯೂ ವೈಫಲ್ಯ ಕಂಡಿದ್ದೇನೆ '' ಎಂದು ಉಲ್ಲೇಖಿಸಿದ್ದಾರೆ. ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಮೃತದೇಹವನ್ನು ಮಿಮ್ಸ್​ಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : Assam crime: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ: ಅತ್ಯಾಚಾರ ಶಂಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.