ETV Bharat / state

ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ದರೋಡೆ: ಕಾರಿನಲ್ಲಿ ಕುಳಿತಿದ್ದ ವ್ಯಕ್ತಿಗೆ ಮಾರಾಕಾಸ್ತ್ರದಿಂದ ಗಾಯಗೊಳಿಸಿ ಚಿನ್ನ ಕಸಿದು ಪರಾರಿ

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂವರು ದುಷ್ಕರ್ಮಿಗಳು ತಾವು ಪೊಲೀಸರೆಂದು ಹೇಳಿ ವ್ಯಕ್ತಿಯೊಬ್ಬರಿಂದ 3.50 ಲಕ್ಷ ರೂ ಮೌಲ್ಯದ ಚಿನ್ನವನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ.

ದರೋಡೆಯಿಂದ ಚಿನ್ನ ಕಳೆದುಕೊಂಡ ವ್ಯಕ್ತಿ ಹಾಗು ಆತನ ಕಾರು

author img

By

Published : Jul 1, 2023, 5:39 PM IST

ಮಂಡ್ಯ: ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ, ದರೋಡೆ ಹಾಗೂ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿದೆ. ಹೆದ್ದಾರಿ ಗಸ್ತು ಹೆಚ್ಚಿಸಿ ಇದಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ಸೂಚನೆ ನೀಡಿದ್ದರು.

ಸಭೆ ನಡೆಸಿ ಸೂಚನೆ ನೀಡಿದ್ದ ಬೆನ್ನಲ್ಲೆ, ಶುಕ್ರವಾರ ತಡರಾತ್ರಿ ಮದ್ದೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣವೊಂದು ಜರುಗಿದೆ. ಮಡಿಕೇರಿ ಮೂಲದ ಮುತ್ತಪ್ಪ ಎಂಬ ಯುವಕ ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದಾಗ ಮದ್ದೂರಿನ ಐಶ್ವರ್ಯ ಕಾನ್ವೆಂಟ್ ಬಳಿ ಕೆಲಹೊತ್ತು ವಿಶ್ರಾಂತಿ ಪಡೆಯಲು ಸರ್ವಿಸ್ ರಸ್ತೆಯಲ್ಲಿ ಕಾರು ನಿಲ್ಲಿಸಿದ್ದಾರೆ.

ಈ ವೇಳೆ, ಕುತ್ತಿಗೆ ಬಳಿ ಮಾರಕಾಸ್ತ್ರಗಳನ್ನು ಇಟ್ಟು ಅಂದಾಜು 3.50 ಲಕ್ಷ ರೂ ಮೌಲ್ಯದ 65 ಗ್ರಾಂ ಚಿನ್ನದ ಸರ ಕಸಿದುಕೊಂಡು ಮೂವರು ದರೋಡೆಕೋರರು ಪರಾರಿಯಾಗಿದ್ದಾರೆ. ಮುತ್ತಪ್ಪ ಅವರು ತಮ್ಮ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡು ಶುಕ್ರವಾರ ತಡರಾತ್ರಿ ತಮ್ಮ ಇನೋವಾ ಕ್ರಿಸ್ಟಾ ಕಾರಿನಲ್ಲಿ ರಾತ್ರಿ 11.30 ರ ವೇಳೆಗೆ ಬೆಂಗಳೂರಿನಿಂದ ಹೊರಟಿದ್ದಾರೆ.

ಬಳಿಕ ಚನ್ನಪಟ್ಟಣದ ಬಳಿ ಟೀ ಕುಡಿದು ಅಂದಾಜು ರಾತ್ರಿ 2.15 ರ ಹೊತ್ತಿಗೆ ಮದ್ದೂರಿನ ಐಶ್ವರ್ಯ ಕಾನ್ವೆಂಟ್ ಬಳಿಗೆ ಬರುತ್ತಿದ್ದಂತೆ ಅನಾರೋಗ್ಯದ ಹಿನ್ನೆಲೆಯಲ್ಲಿ ತಲೆಸುತ್ತುವಂತಾಗಿದೆ. ತಕ್ಷಣವೇ ಕಾರನ್ನು ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿ ಕೆಲ ಕಾಲ ವಿಶ್ರಾಂತಿ ಪಡೆಯಲು ಮುಂದಾಗಿದ್ದಾರೆ. ಕೆಲ ಹೊತ್ತಿನ ಬಳಿಕ ಸ್ಥಳಕ್ಕೆ ಬಂದ ಮೂವರು ದುಷ್ಕರ್ಮಿಗಳು ನಾವು ಪೋಲೀಸ್ ಸಿಬ್ಬಂದಿಗಳು ನೀವು ಕುಡಿದು ಮಲಗಿದ್ದೀರಾ ತಪಾಸಣೆ ಮಾಡಬೇಕೆಂದು ಬಲವಂತವಾಗಿ ಕಾರಿನ ಬಾಗಿಲನ್ನು ತೆಗೆಸಿದ್ದಾರೆ.

ಕಾರಿನ ಬಾಗಿಲು ತೆಗೆಯುತ್ತಿದ್ದಂತೆ ಇಬ್ಬರು ಒಳಗೆ ಹೋಗಿ ತಮ್ಮ ಬಳಿ ಇದ್ದ ಮಾರಕಾಸ್ತ್ರಗಳಿಂದ ಮುತ್ತಪ್ಪ ಅವರ ಕತ್ತಿನ ಬಳಿಗೆ ಇಟ್ಟು ಹಣ ಮತ್ತು ಚಿನ್ನಾಭರಣಗಳನ್ನು ನೀಡುವಂತೆ ಧಮ್ಕಿ ಹಾಕಿದ್ದಾರೆ. ಆದರೆ, ಚಿನ್ನಾಭರಣಗಳನ್ನು ನೀಡಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಬಲಗೈ ಮತ್ತು ಕತ್ತಿನ ಬಳಿ ಮಾರಕಾಸ್ತ್ರಗಳಿಂದ ಗಾಯಗೊಳಿಸಿದ್ದರಿಂದ ಮುತ್ತಪ್ಪ ಬೆದರಿದ್ದಾರೆ.

ಅವರಿಂದ ಅಂದಾಜು 65 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಮೂವರು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕೆಲ ಹೊತ್ತಿನ ಬಳಿಕ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಗಸ್ತು ಪೊಲೀಸರು ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಮದ್ದೂರು ಪೊಲೀಸ್​​ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಮುತ್ತಪ್ಪ ದೂರು ಸಲ್ಲಿಸಿದ್ದಾರೆ. ಮದ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಯುವಕ ಉಗುಳಿದ್ದಕ್ಕೆ ಪೊಲೀಸರಿಂದ ಅಮಾನವೀಯ ಶಿಕ್ಷೆ.. ವಿಡಿಯೋ ವೈರಲ್: ಪೊಲೀಸರ ಅಮಾನತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.