ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್‌ಗೆ ಗೌರವ, ಸನ್ಮಾನಗಳು ನಡೆಯುತ್ತಿದ್ದು, ಇಂದು ಮದ್ದೂರು ಕ್ಷೇತ್ರದ ಶಾಸಕ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸಿದರು.
ಮದ್ದೂರು ಕ್ರೀಡಾಂಗಣದಲ್ಲಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು, ವೈದ್ಯರು, ಪೊಲೀಸರು, ಪುರಸಭೆ ನೌಕರರು ಹಾಗೂ ಜಿಲ್ಲಾಧಿಕಾರಿಗೆ ಹೂಮಳೆ ಸುರಿಸಿ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದ ನಂತರ ಕೊರೊನಾ ವಾರಿಯರ್ಸ್‌ಗೆ ದಿನಸಿ ಕಿಟ್ ವಿತರಣೆ ಮಾಡಿದರು.