ಮಂಡ್ಯ: ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಿಜೆಪಿಗೆ ಬರುವ ಶಾಸಕರನ್ನು ತಡೆಯಲು ಚುನಾವಣೆ ಮೂಲಕ ಅವ್ರಿಗೆ ಭಯ ಹುಟ್ಟಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಟಾಂಗ್ ನೀಡಿದರು.
ಮಂಡ್ಯದಲ್ಲಿ ಮಾತನಾಡಿದ ಅವರು, ಅವರ ಪಕ್ಷದ ಶಾಸಕರನ್ನು ಎದುರಿಸಲು ಹೀಗೆ ಭಯ ಹುಟ್ಟಿಸುತ್ತಿದ್ದಾರೆ. ನಮಗೆ ಚುನಾವಣೆಯ ಭಯವಿಲ್ಲ. ಯಾವಾಗ ಬಂದರೂ ಎದುರಿಸುತ್ತೇವೆ. ನಾವು ಸರ್ಕಾರದಲ್ಲಿ ಪೂರ್ಣಾವಧಿ ಪೂರೈಸುತ್ತೇವೆ ಎಂದು ಹೇಳಿದರು.
ಕೋಡಿಮಠದ ಶ್ರೀಗಳ ಭವಿಷ್ಯಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಅವರದ್ದು ವೈಯಕ್ತಿಕ ಅಭಿಪ್ರಾಯ. ಮುಂದೆಯೂ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ರು.
ಅದ್ಧೂರಿ ಸ್ವಾಗತ ನೀಡಿದ ಜಿಲ್ಲೆಯ ಜನರಿಗೆ ನಾನು ಚಿರಋಣಿ. ಜಿಲ್ಲೆಯ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಅವರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.