ಮಂಡ್ಯ: ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಮಂಡ್ಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಧ್ಯಾಹ್ನ ವಿವಿಗೆ ಭೇಟಿ ನೀಡಿ ಸಿಬ್ಬಂದಿಯಿಂದ ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದರು. ಅಲ್ಲದೆ ಕಟ್ಟಡ, ಪೀಠೋಪಕರಣ ಸೇರಿದಂತೆ ಅಗತ್ಯ ವಸ್ತುಗಳ ಕುರಿತು ಮಾತುಕತೆ ನಡೆಸಿದರು.
ಸಚಿವರಿಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್, ಶಾಸಕ ಎಂ. ಶ್ರೀನಿವಾಸನ್ ಸಾಥ್ ನೀಡಿದರು.