ಮಂಡ್ಯ: ದೇವರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಲಹ ನಡೆದು ವ್ಯಕ್ತಿಯ ಮೇಲೆ ಮತ್ತೋರ್ವ ವ್ಯಕ್ತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋಮನಹಳ್ಳಿ ಗ್ರಾಮದ ಲೋಕೇಶ್ (34) ಗಾಯಗೊಂಡ ವ್ಯಕ್ತಿ. ಗ್ರಾಮದಲ್ಲಿ ನಡೆಯುತ್ತಿದ್ದ ಪಟ್ಲದಮ್ಮ ಉತ್ಸವದ ವೇಳೆ ಸುನೀಲ್ ಎಂಬ ಯುವಕ ಲೋಕೇಶ್ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಗಾಯಾಳು ವ್ಯಕ್ತಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.