ಮಂಡ್ಯ : ಜೋತು ಬಿದ್ದ ವಿದ್ಯುತ್ ತಂತಿಗಳಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಫಸಲಿಗೆ ಬಂದ ಕಬ್ಬು ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ನಡೆದಿದೆ.
ಕೆಂಪರಾಜು ಎಂಬುವರಿಗೆ ಸೇರಿದ ಎರಡು ಎಕರೆ ಕಬ್ಬು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಗ್ರಾಮಸ್ಥರೆಲ್ಲರೂ ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಸೆಸ್ಕ್ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ರೀತಿಯ ಘಟನೆಗಳು ಮರು ಕಳಿಸುತ್ತಿವೆ. ಸದ್ಯ ನಷ್ಟಕ್ಕೊಳಗಾಗಿರುವ ರೈತನಿಗೆ ಸೆಸ್ಕ್ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.