ಮಂಡ್ಯ: ಮೈಶುಗರ್, ಪಿಎಸ್ಎಸ್‌ಕೆ ಇನ್ನೂ ಆರಂಭವಾಗಿಲ್ಲ. ಇದರ ಲಾಭ ಪಡೆಯಲು ಮಧ್ಯವರ್ತಿಗಳು ಮುಂದಾಗಿದ್ದಾರೆ. ಮಧ್ಯವರ್ತಿಗಳು ರೈತರಿಂದ ಕಬ್ಬು ಪಡೆದು, ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ಜಿಪಂ ಸದಸ್ಯರು ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಗಂಭೀರ ಚರ್ಚೆ ಮಾಡಿದರು.
ಅಧ್ಯಕ್ಷೆ ನಾಗರತ್ನ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಭೆ ಆರಂಭವಾಗುತ್ತಿದ್ದಂತೆ, ಸದಸ್ಯರಾದ ಶಿವಣ್ಣ ಸೇರಿದಂತೆ ಹಲವರು ವಿಚಾರವನ್ನು ಸಭೆಯ ಗಮನಕ್ಕೆ ತಂದು ಶೀಘ್ರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು. ಜಿಲ್ಲಾಧಿಕಾರಿ ಅವರಿಗೆ ಪತ್ರದ ಮೂಲಕ ವಿಚಾರ ತಿಳಿಸಬೇಕು ಎಂದು ಸಲಹೆ ನೀಡಿದರು.
ಕೆಲವು ಮಧ್ಯವರ್ತಿಗಳು ರೈತರಿಂದ ಕಬ್ಬು ಪಡೆದು ಕಾರ್ಖಾನೆಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರ ಹಿಂದೆ ಕಂಪನಿಯ ಅಧಿಕಾರಿಗಳ ಕೈವಾಡ ಇರುವ ಅನುಮಾನ ವ್ಯಕ್ತಪಡಿಸಿದರು. ಅಧ್ಯಕ್ಷರು ಈ ವಿಚಾರವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದರು.