ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಗ್ರಾಮ ವಾಸ್ತವ್ಯ ಹೂಡಿ, ಜಿಲ್ಲೆಯ ಆಡಳಿತವನ್ನು ಜನರ ಬಳಿ ಕೊಂಡೊಯ್ಯಲು ಮುಂದಾಗಿದ್ದಾರೆ.
ಕಂದಾಯ ಸಚಿವರ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇ ಶನಿವಾರದಂದು ಜಿಲ್ಲಾಧಿಕಾರಿ ಸೇರಿದಂತೆ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮಗಳಿಗೆ ಭೇಟಿ ನೀಡಬೇಕಾಗಿದೆ. ಸರ್ಕಾರದ ಆದೇಶದಂತೆ ಶೀಳನೆರೆ ಗ್ರಾಮದಲ್ಲಿ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ' ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಓದಿ: ಮಾಜಿ ಸಿಎಂಗಳಿಬ್ಬರಿಗೂ ರಾಮ ಮಂದಿರ ವಿಚಾರದಲ್ಲಿ ಲೆಕ್ಕ ಕೇಳುವ ಅಧಿಕಾರವಿಲ್ಲ: ಕೆ.ಎಸ್.ಈಶ್ವರಪ್ಪ
ಒಂದು ದಿನದ ಮುಂಚೆಯೇ ಗ್ರಾಮ ವಾಸ್ತವ್ಯ ಹೂಡಿರುವ ಡಿಸಿ ಅಶ್ವಥಿ, ಶೀಳನೆರೆ ಗ್ರಾಮದ ಅರಳಿಕಟ್ಟೆ ಬಳಿ ಗ್ರಾಮದ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದರು.