ಮಂಡ್ಯ: ಉಪ ಚುನಾವಣೆಯನ್ನು ಪ್ಲಾಸ್ಟಿಕ್ ಮುಕ್ತ ಚುನಾವಣೆ ನಡೆಸಲು ಜಿಲ್ಲಾಡಳಿತ ಚಿಂತನೆ ನಡೆಸುತ್ತಿದೆ, ಹಾಗಾಗಿ ಪ್ಲಾಸ್ಟಿಕ್ ಮುಕ್ತವಾಗಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು, ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದಿನಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಜಿಲ್ಲೆಯಲ್ಲಿ ಯಾವುದೇ ರಾಜಕೀಯ ಸಭೆ ಮಾಡಲು ಅನುಮತಿ ಪಡೆಯುವುದು ಕಡ್ಡಾಯ. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅನುಮತಿ ಪಡೆಯಬೇಕು ಎಂದರು.
ಇನ್ನು ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಒಟ್ಟು 2,08,937 ಮತದಾರರಿದ್ದು, ಇವರಲ್ಲಿ ಹೆಂಗಸರು 1,02,844 ಮತ್ತು 1,06,088 ಗಂಡಸರು ತಮ್ಮ ಹಕ್ಕನ್ನು ಚಲಾವಣೆ ಮಾಡಲಿದ್ದಾರೆ. 258 ಮತಗಟ್ಟೆಗಳಿದ್ದು, 8 ಚೆಕ್ ಪೋಸ್ಟ್ ಸೇರಿದಂತೆ ಸಂಚಾರಿ ದಳಗಳನ್ನು ಕ್ಷೇತ್ರದಲ್ಲಿ ನಿಯೋಜನೆ ಮಾಡಲಾಗುವುದು ಎಂದರು.