ಮಂಡ್ಯ : ಜಿಲ್ಲೆಯ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ವೈದ್ಯರು ಭರ್ಜರಿ ಡ್ಯಾನ್ಸ್ ಮಾಡಿ ಸೋಂಕಿತರಿಗೆ ಮನರಂಜನೆ ನೀಡಿರುವ ವಿಡಿಯೋ ಸಖತ್ ವೈರಲ್ ಆಗಿದೆ.
ಕೊರೊನಾ ಸೋಂಕಿತರು ಸಹ ವೈದ್ಯರೊಂದಿಗೆ ಭರ್ಜರಿ ಸ್ಟೆಪ್ ಹಾಕಿದ್ದು, ಆಡಳಿತಾಧಿಕಾರಿ ಮಾಧವ್ ನಾಯಕ್ ನೇತೃತ್ವದಲ್ಲಿ ವೈದ್ಯರು ಕುಣಿದು ಕುಪ್ಪಳಿಸಿದ್ದಾರೆ.
ಸೋಂಕಿತರಿಗೆ ಆತ್ಮಸ್ಥೆರ್ಯ ತುಂಬಲು ವಿಭಿನ್ನ ಪ್ರಯತ್ನ ಮಾಡಲಾಗಿದೆ. ಕನ್ನಡ ಸಿನಿಮಾ ಹಾಡು ಹಾಗೂ ಕೊಡವ ಸಾಂಗ್‌ಗಳಿಗೆ ಪಿಪಿಇ ಕಿಟ್ ಧರಿಸಿ ಕುಣಿದು ಕುಪ್ಪಳಿಸಿದ್ದಾರೆ.