ಮಂಡ್ಯ: ಮಲಗಿದ್ದವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಜೋಡಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಯಲಿಯೂರು ಸಮೀಪದ ತೋಟದ ಮನೆಯಲ್ಲಿ ನಡೆದಿದೆ.
ಮಾರುತಿ ಬ್ರಿಕ್ಸ್ನಲ್ಲಿ ಕೆಲಸ ಮಾಡುತ್ತಿದ್ದ ರಾಮಮೂರ್ತಿ(46) ಮತ್ತು ಬಸವರಾಜು(44) ಎಂಬವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ, ಕೊಲೆ ಮಾಡಲಾಗಿದೆ.
ರಾತ್ರಿ ಮಲಗಿದ್ದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರ ಭೇಟಿ ಪರೀಶೀಲನೆ ನಡೆಸಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.