ಮಂಡ್ಯ: ಮಳವಳ್ಳಿ ತಾಲೂಕಿನ ಬಸವನಹಳ್ಳಿ ಗ್ರಾಮಸ್ಥರಿಗೆ ಕುಡಿಯುವ ನೀರಿಗಾಗಿ ಒಂದೇ ಬಾವಿ ಇದ್ದು, ನೀರಿಗಾಗಿ ಮುಗಿಬೀಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಎರಡು ವರ್ಷಗಳ ಹಿಂದೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿದ್ದರೂ ಅದು ಪ್ರಯೋಜನಕ್ಕೆ ಬರದಂತಾಗಿದೆ.
ಗ್ರಾಮದಲ್ಲಿ ಹಲವು ಬಾರಿ ಕೊಳವೆಬಾವಿ ಕೊರೆದರೂ ನೀರು ಸಿಕ್ಕಿಲ್ಲ. ಕಾವೇರಿ ನದಿ ಕೇವಲ 10 ಕಿ.ಮೀ ದೂರದಲ್ಲಿದ್ದರೂ ನೀರಿನ ಸಮಸ್ಯೆ ಬಗೆಹರಿದಿಲ್ಲ. ಇನ್ನಾದರೂ ಅಧಿಕಾರಿಗಳು ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕಿದೆ. ಗ್ರಾಮದಲ್ಲಿ ಜೋಡಣೆ ಮಾಡಿರುವ ಶುದ್ಧ ಕುಡಿಯುವ ಘಟಕಕ್ಕೆ ಚಾಲನೆ ನೀಡಿ ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಬೇಕಿದೆ.