ETV Bharat / state

ಮಂಡ್ಯದಲ್ಲಿ ದೇವೇಗೌಡರ ಪಕ್ಷಕ್ಕೆ ಠಕ್ಕರ್ ಕೊಡಲು ಬಿಜೆಪಿ ಪ್ರಯತ್ನ: ಯಾರಿಗೆ ಸಿಹಿ-ಕಹಿ?

ಮಂಡ್ಯ ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ಮತಬೇಟೆ ನಡೆಸಿದ್ದಾರೆ.

mandya
ಮಂಡ್ಯ ಚುನಾವಣೆ
author img

By

Published : May 7, 2023, 10:03 AM IST

Updated : May 7, 2023, 10:31 AM IST

ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಮಂಡ್ಯ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇನ್ನು ಎರಡು ದಿಗಳು ಮಾತ್ರ ಬಾಕಿ ಉಳಿದಿದೆ. ಈ ನಿಟ್ಟಿನಲ್ಲಿ ಸಕ್ಕರೆ ನಾಡು ಮಂಡ್ಯದ ಮೇಲೆ ರಾಜ್ಯದ ಮೂರೂ ಪ್ರಮುಖ ಪಕ್ಷಗಳು ದೃಷ್ಟಿ ನೆಟ್ಟಿವೆ. ಜಿಲ್ಲೆಗೆ ವಿವಿಧ ಪಕ್ಷಗಳ ರಾಷ್ಟ್ರ ಮತ್ತು ರಾಜ್ಯ ನಾಯಕರೇ ದಂಡೇ ಆಗಮಿಸುತ್ತಿದ್ದು ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದೆ.

ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂಬ ಪಣ ತೊಟ್ಟಿರುವ ಬಿಜೆಪಿ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಪ್ರಭಾವಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಶನಿವಾರ ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಟ್ಟಣದಲ್ಲಿ ರೋಡ್ ಶೋ ನಡೆಸಿ ಎಸ್.ಪಿ.ಸ್ವಾಮಿ ಪರ ಮತ ಯಾಚಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಸ್ಥಳೀಯ ಮುಖಂಡರು ಬೃಹತ್ ಹಾರ, ಪುಷ್ಪವೃಷ್ಠಿ, ಜಾನಪದ ಕಲಾ ತಂಡಗಳೊಂದಿಗೆ ಸ್ವಾಗತಿಸಿದರು. ರೋಡ್ ಶೋದುದ್ದಕ್ಕೂ ಕಾರ್ಯಕರ್ತರು ಭಾಗವಹಿಸಿ ಘೋಷಣೆ ಮೊಳಗಿಸಿದರು. ಜೆ.ಪಿ.ನಡ್ಡಾ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯನ್ನು ಜನರ ಮುಂದಿಟ್ಟರು. ಡಬಲ್ ಇಂಜಿನ್ ಸರ್ಕಾರದಿಂದ ಆಗುವ ಪ್ರಯೋಜನದ ಬಗ್ಗೆ ಮನವರಿಕೆ ಮಾಡಿಕೊಟ್ಟು, ರಾಜ್ಯದಲ್ಲೂ ಬಿಜೆಪಿ ಸರ್ಕಾರ ಬರಲು ಮದ್ದೂರಿನಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಸುಮಲತಾ ಅಂಬರೀಶ್​, ಸಂಸದೆ

ಸುಮಲತಾ ಪ್ರಚಾರ: ಬಿಜೆಪಿ ಅಭ್ಯರ್ಥಿ ಪರ ಸಂಸದೆ ಸುಮಲತಾ ಮತ ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ ಮಂಡ್ಯದ ಬಸರಾಳು ಗ್ರಾಮದಲ್ಲಿ ಅವರು ಅಭ್ಯರ್ಥಿ ಅಶೋಕ್ ಜಯರಾಂ ಪರ ಬೃಹತ್ ರೋಡ್ ಶೋ ನಡೆಸಿದರು. ಗ್ರಾಮದ ಸಂತೆ ಮೈದಾನದಿಂದ ಪ್ರಮುಖ ರಸ್ತೆಯಲ್ಲಿ ರೋಡ್ ಶೋ ನಡೆಸಿ ಮಾತನಾಡಿದ ಅವರು ಜಯರಾಂ ಜಿಲ್ಲೆಯ ಧೀಮಂತ ನಾಯಕ. ಮಂಡ್ಯಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಅಂಬರೀಶ್, ಜಯರಾಂ ಅಭಿವೃದ್ಧಿಯ ಹರಿಕಾರರು. ಅಭಿವೃದ್ಧಿ ಕೆಲಸ ಮಾಡುವವರಿಗೆ ಮಾತ್ರ ನೀವು ಮತ ಹಾಕಬೇಕು. ಮಂಡ್ಯ ಜಿಲ್ಲೆಯಲ್ಲಿ ಬದಲಾವಣೆಯಾಗಬೇಕು. ಅಶೋಕ್ ಜಯರಾಂ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮಂಡ್ಯದಲ್ಲಿ ಜೆಡಿಎಸ್​ ಕಸರತ್ತು: ಕಳೆದ ಲೋಕಸಭಾ ಚುನಾವಣೆಯಿಂದ ತನ್ನ ಭದ್ರಕೋಟೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ನಿರಂತರವಾಗಿ ಹಿನ್ನಡೆಯಾಗುತ್ತಿದೆ. ಹೀಗಾಗಿ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ದಳಪತಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಪಂಚರತ್ನ ರಥ ಯಾತ್ರೆಯನ್ನು ಯಶಸ್ವಿಯಾಗಿ ನಡೆಸಿದ್ದ ಜೆಡಿಎಸ್‌ ಇದೀಗ ಈ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಕಸರತ್ತು ನಡೆಸಿದ್ದಾರೆ. ನಿನ್ನೆ ಮಂಡ್ಯದ ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ ನೀಡಿ ಪ್ರಚಾರ ನಡೆಸಿದರು.

ಜೆಡಿಎಸ್‌ ಅಭ್ಯರ್ಥಿ ಡಿ.ಸಿ.ತಮ್ಮಣ್ಣ ಪರ ಚುನಾವಣಾ ಪ್ರಚಾರ ನಡೆಸಿದ ಗೌಡರು, ತಮ್ಮಣ್ಣ ಬರೀ ರಾಜಕಾರಣಿಯಲ್ಲ. ತುಂಬಾ ವಿಷಯ ತಿಳಿದುಕೊಂಡಿರುವ ವ್ಯಕ್ತಿ. ಜಿ.ಪಂ.ಸದಸ್ಯ ಅವರಿಗೆ ಮೋಸ ಮಾಡಿದ್ದಾರೆ. ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಆ ವ್ಯಕ್ತಿಯ ವಿರುದ್ಧ ಮಾತನಾಡುವುದು ಅಷ್ಟು ಸೂಕ್ತ ಅಲ್ಲ. ತಮ್ಮಣ್ಣ ಅವರ ವ್ಯಕ್ತಿತ್ವ ಬೇರೆ. ದಿನದ 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸ ಇದ್ದರೂ ಮದ್ದೂರು ಬಿಟ್ಟು ಬರಲ್ಲ. ಮತ್ತೊಮ್ಮೆ ಅವರನ್ನು ಆಶೀರ್ವಾದ ಮಾಡಿ ಕೈ ಹಿಡಿಯಬೇಕು. ಮೇ 10 ರಂದು ತಮ್ಮಣ್ಣ ಅವರನ್ನು ಆಯ್ಕೆ ಮಾಡಿ ವಿಧಾನ ಸೌಧಕ್ಕೆ ಕಳುಹಿಸಿ ಅಂತಾ ಮನವಿ ಮಾಡಿದರು.

ಮಾಜಿ ಜಿ.ಪಂ.ಅಧ್ಯಕ್ಷ ಗುರುಚರಣ್ ,ಜೆಡಿಎಸ್​

ಗುರುಚರಣ್ ಕ್ಯಾಂಪೇನ್: ಮಾಜಿ ಜಿ.ಪಂ.ಅಧ್ಯಕ್ಷ ಗುರುಚರಣ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಬಳಿಕ ಜೆಡಿಎಸ್ ಪ್ರಚಾರ ಸಭೆಯಲ್ಲಿ ಮೊದಲ ಭಾಷಣ ಮಾಡಿದರು. ಜನರ ಸಮಸ್ಯೆಗಳನ್ನು ಬಗೆಹರಿಸುವ ಶಾಸಕ ಡಿ.ಸಿ.ತಮ್ಮಣ್ಣ, ಮದ್ದೂರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಕಳೆದ ಕಾಂಗ್ರೆಸ್ ಪಕ್ಷದಲ್ಲಿ 20 ವರ್ಷದಿಂದ ಕೆಲಸ ಮಾಡಿದ್ದೆ. ಕಾಂಗ್ರೆಸ್​ ಪಕ್ಷದವರು ನಿನ್ನನ್ನೇ ಅಭ್ಯರ್ಥಿ ಮಾಡುತ್ತೇನೆಂದು 10 ಬಾರಿ ಹೇಳಿದರು. ಕಾಂಗ್ರೆಸ್ ಪಕ್ಷದವರು ಹೇಳಿದನ್ನು ನಂಬಿದ್ದೆ. ಎಸ್.ಎಂ.ಕೃಷ್ಣ ಬಿಟ್ಟೋಗಿದ್ದಕ್ಕೆ ಟಿಕೆಟ್‌ ಕೊಟ್ಟಿಲ್ಲ ಅಂದರು. ಬಿಜೆಪಿಗೆ ಹೋಗದೆ ಕಾಂಗ್ರೆಸ್​ನಲ್ಲೇ ಇದ್ದೆ. ಆದರೆ ಕಾಂಗ್ರೆಸ್ ನಮ್ಮನ್ನು ಯಾವ ರೀತಿ ನಡೆಸಿಕೊಂಡಿದೆ ಅನ್ನೋದು ಗೊತ್ತಿದೆ ಎಂದರು.

ಇದನ್ನೂ ಓದಿ: ಬೆಂಗಳೂರಲ್ಲಿ ಇಂದು ಮೋದಿ ರೋಡ್​ ಶೋ: ಶಿವಮೊಗ್ಗ, ನಂಜನಗೂಡಲ್ಲೂ ಸಮಾವೇಶ

Last Updated : May 7, 2023, 10:31 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.