ಮಂಡ್ಯ: ಕೆ.ಆರ್ ಪೇಟೆ ತಾಲೂಕಿನ ಪುರ ಗ್ರಾಮದ ಬಳಿ ಆನೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಾಸನದ ಸಕಲೇಶಪುರ ಭಾಗದಿಂದ ದಾರಿ ತಪ್ಪಿ ಕೆ.ಆರ್. ಪೇಟೆ ಭಾಗಕ್ಕೆ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ನಗರ ಪ್ರದೇಶಗಳಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ಕಂಡ ಸಾರ್ವಜನಿಕರು ಆತಂಕಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ಆರ್ಎಫ್ಓ ಗಂಗಾಧರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ತಂಡ ಆನೆಯನ್ನ ಕಾಡಿಗಟ್ಟಲು ಕಾರ್ಯಾಚರಣೆ ಆರಂಭಿಸಿದ್ದಾರೆ.
ಓದಿ: ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ: ಇಂದು ಪೊಲೀಸರಿಂದ ಸ್ಥಳ ಮಹಜರು