ಮಂಡ್ಯ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಶಿವಮ್ಮ ಎಂಬವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳೆ ರಕ್ಷಣೆಗೆ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ಸಿಲುಕಿಕೊಂಡು ಸುಮಾರು 6 ವರ್ಷದ ಪ್ರಾಯದ ಗಂಡು ಆನೆ ಸಾವಿಗೀಡಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಜಮೀನು ಮಾಲೀಕರ ಮೇಲೆ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.