ETV Bharat / state

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ

ಪೆಟ್ರೋಲ್ ಬಂಕ್ ತೆರೆಯಲು ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

environmental-pollution-control-board-officer-detained-by-acb-in-bribe-case
ಲಂಚ ಪಡೆಯುತ್ತಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಎಸಿಬಿ ಬಲೆಗೆ
author img

By

Published : May 7, 2022, 4:56 PM IST

ಮಂಡ್ಯ: ಪೆಟ್ರೋಲ್ ಬಂಕ್ ತೆರೆಯಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಮಾಣಪತ್ರ ಪಡೆಯುಲು ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ ಲಂಚದ ಬೇಡಿಕೆ ಇಟ್ಟ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮಂಡ್ಯದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಕೆ.ಆರ್. ಹೇಮಲತಾ ಎಂಬುವರೆ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದವರು.

ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದ ವ್ಯಕ್ತಿಯೊಬ್ಬರು ಪೆಟ್ರೋಲ್ ಬಂಕ್ ತೆರೆಯಲು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಬಂಕ್ ತೆರೆಯಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಮಾಣಪತ್ರ ತರುವಂತೆ ಅರ್ಜಿದಾರರಿಗೆ ತಿಳಿಸಲಾಗಿತ್ತು. ಅರ್ಜಿದಾರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಮಾಣಪತ್ರ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದರು.

ಆದರೆ, ಹೇಮಲತಾ ಅವರು 30,000 ರೂ. ಲಂಚ ನೀಡುವಂತೆ ಅರ್ಜಿದಾರನಿಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತ ಅರ್ಜಿದಾರ ಈ ಬಗ್ಗೆ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆ ಇಂದು 15,000 ರೂ. ಹಣದೊಂದಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಬಂದ ಅರ್ಜಿದಾರ, ಅಧಿಕಾರಿ ಹೇಮಲತಾಗೆ ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲಂಚ ಪಡೆಯುತ್ತಿದ್ದ ಹೇಮಲತಾ ವಶಕ್ಕೆ ಪಡೆದಿರುವ ಎಸಿಬಿ ಅಧಿಕಾರಿಗಳು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿ ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲಕಿ ಆತ್ಮಹತ್ಯೆಗೆ ಪ್ರೇರಣೆ ಆರೋಪ : ಕನ್ಯಾನದ ಯುವಕ ಅರೆಸ್ಟ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.