ETV Bharat / state

ಮಂಡ್ಯದಲ್ಲಿ ಸಾರ್ವಜನಿಕರ ಬಳಿ ಹಣ ವಸೂಲಿ ಮಾಡ್ತಿದ್ದ ನಕಲಿ ಪೊಲೀಸ್ ಬಂಧನ - ನಕಲಿ ಪೊಲೀಸ್ ಬಂಧನ

ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವುದಾಗಿ ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್​ನನ್ನು​ ಬಂಧಿಸಿದ ಪೊಲೀಸರು.

fake-police-arrested-in-mandya
ಹಣ ವಸೂಲಿ ಮಾಡ್ತಿದ್ದ ನಕಲಿ ಪೊಲೀಸ್ ಬಂಧನ
author img

By

Published : Feb 14, 2023, 12:39 PM IST

ಮಂಡ್ಯ: ಪಿಎಸ್‌ಐ ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಒಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ಜರುಗಿದೆ. ಕೆ.ಎಂ‌.ದೊಡ್ಡಿಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಗೊಟ್ಟಿಗೆರೆ ನಿವಾಸಿ ಸಂಜಯ್ ಬಂಧಿತ ಆರೋಪಿ. ಸಂಜಯ್ ಪಿಎಸ್‌ಐ ಸಮವಸ್ತ್ರ ಧರಿಸಿ ಕೆಎಂ ದೊಡ್ಡಿ ಸುತ್ತಮುತ್ತ ದ್ವಿಚಕ್ರ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದ. ಬಳಿಕ ಸಂಚಾರಿ ನಿಯಮ ಉಲ್ಲಂಘನೆಯಾಗಿದೆ ಎಂದು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ.

ನಕಲಿ ಪೊಲೀಸ್ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ಸ್ಥಳೀಯರು ಕೆಎಂ ದೊಡ್ಡಿ ಠಾಣೆಯ ಇನ್ಸ್​ಪೆಕ್ಟರ್ ಆನಂದ್‌ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಎಚ್ಚೆತ್ತ ಕೆಎಂ ದೊಡ್ಡಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಸಂಜಯ್ ಪಿಎಸ್ಐ ಸಮವಸ್ತ್ರದಲ್ಲಿ ಇರುವಾಗಲೇ ಹಿಡಿದು ವಿಚಾರಣೆ ಮಾಡಿದಾಗ ತಾನೊಬ್ಬ ನಕಲಿ ಪೊಲೀಸ್ ಎಂದು ತಪೊಪ್ಪಿಕೊಂಡಿದ್ದಾನೆ. ಆರೋಪಿ ಸಂಜಯ್‌ಗೆ ವಾರ್ನ್ ಮಾಡಲಾಗಿದ್ದು, ಕೋರ್ಟ್ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ.

ಹುಬ್ಬಳ್ಳಿ: ನಕಲಿ ದಾಖಲೆ ಸೃಷ್ಟಿಸಿ ರೈಲ್ವೇ ನೌಕರಿ ಪಡೆದ ಪ್ರಕರಣ.. ನಕಲಿ ದಾಖಲೆ ಸೃಷ್ಟಿಸಿ ರೈಲ್ವೆ ನೌಕರಿ ಪಡೆದಿರುವ ಪ್ರಕರಣ 32 ವರ್ಷಗಳ ನಂತರ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶ ಮೂಲದ ವ್ಯಕ್ತಿ ಪರಿಶಿಷ್ಟ ವರ್ಗದ ವಾಲ್ಮೀಕಿ ಸಮುದಾಯದ ನಕಲಿ ಪ್ರಮಾಣಪತ್ರ ಪಡೆದು ನೈರುತ್ಯ ರೈಲ್ವೆಯಲ್ಲಿ ಉದ್ಯೋಗ ಪಡೆದು ವಂಚಿಸಿರುವ ಪ್ರಕರಣ ಸೋಮವಾರ ನಗರದಲ್ಲಿ ಬೆಳಕಿಗೆ ಬಂದಿತ್ತು. ಪ್ರಕಾಶಂ ಜಿಲ್ಲೆಯ ಗುದ್ದಲೂರು ತಾಲೂಕಿನ ಮಂಡ್ಲಾಚಕ್ರಧರ ವೆಂಕಟಸುಬ್ಬಯ್ಯ ನಕಲಿ ದಾಖಲೆ ಸೃಷ್ಟಿಸಿರುವ ವ್ಯಕ್ತಿ.

ಇನ್ನು, ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ಮಾಡದೇ ಪ್ರಮಾಣ ಪತ್ರ ನೀಡಿರುವ ತಹಶೀಲ್ದಾರ್, ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ವಿರುದ್ಧ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಂಧ್ರಪ್ರದೇಶದಲ್ಲಿ ವಾಲ್ಮೀಕಿ‌ ಸಮುದಾಯ ಹಿಂದುಳಿದ ವರ್ಗದಲ್ಲಿ ಬರುತ್ತದೆ. ಈ ವಿಷಯ ತಿಳಿದಿದು, 1991ರ ಡಿಸೆಂಬರ್​​ನಲ್ಲಿ ಮಂಡ್ಲಾ ಚಕ್ರಧರ, ಸುಳ್ಳು ಘೋಷಣಾ ಪತ್ರಗಳನ್ನು ಸೃಷ್ಟಿಸಿ ಹುಬ್ಬಳ್ಳಿ ತಹಶೀಲ್ದಾರ್​ಗೆ ಸಲ್ಲಿಸಿ ರಾಜ್ಯದಲ್ಲಿನ ವಾಲ್ಮೀಕಿ ಪರಿಶಿಷ್ಟ ಸಮುದಾಯದ ಪ್ರಮಾಣ ಪತ್ರ ಪಡೆದಿದ್ದಾನೆ. ದಾಖಲೆಗಳನ್ನು ಪರಿಶೀಲನೆ ನಡೆಸದೆ, ಅವನ ಪೂರ್ವಜರ, ರಕ್ತಸಂಬಂಧಿಕರ ಹಾಗೂ ಆಚಾರ-ವಿಚಾರ ಪರಿಶೀಲನೆ ನಡೆಸದೆ ಅಂದಿನ ತಹಶೀಲ್ದಾರ್, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿ ಅಪರಾಧ ಎಸಗಿದ್ದಾರೆ ಎನ್ನಲಾಗಿದೆ.

ಇನ್ನು, ಇದೇ ಮಂಡ್ಲಾ ವೆಂಕಟಸುಬ್ಬಯ್ಯ ತನ್ನ ಹಾಗೂ ಇಬ್ಬರು ಮಕ್ಕಳ ಹೆಸರಲ್ಲೂ ನಕಲಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ವಂಚಿಸಿದ್ದಾನೆ. ಈ ಸಂಬಂಧ ಆತನ ವಿರುದ್ದ ಪೊಲೀಸ್​ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಅವಧಿಯ ತಹಶೀಲ್ದಾರ್, ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಾಧಿಕಾರಿ ಸೇರಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸುಳ್ಳು ದಾಖಲೆ ಸೃಷ್ಟಿಸಿ ರೈಲ್ವೆ ನೌಕರಿ ಪಡೆದ ಭೂಪ: 32 ವರ್ಷಗಳ ನಂತರ ಪ್ರಕರಣ ಬೆಳಕಿಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.