ಮಂಡ್ಯ: ಶ್ರೀರಂಗಪಟ್ಟಣ ಚೆಕ್‌ಪೋಸ್ಟ್ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿರುವ ವ್ಯಕ್ತಿಯ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಮುಂದಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದ ರೈತ ಪಿ.ರಾಮಕೃಷ್ಣ (50) ಎಂಬುವವರು ಅಂಗಾಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಅಪಘಾತಕ್ಕೀಡಾದ ರೈತ ಪಿ. ರಾಧಾಕೃಷ್ಣ ಅವರನ್ನು ಮೈಸೂರಿನ ಸುಯೋಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಘೋಷಿಸಿದ್ದಾರೆ. ಸುಯೋಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ದೇಹವನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಬಿಜಿಎಸ್ ಆಸ್ಪತ್ರೆಯಲ್ಲಿ ವೈದ್ಯರು ಹೆಚ್ಚಿನ ಪರಿಶೀಲನೆ ನಡೆಸಿ ಅಂಗಾಂಗ ಬೇರ್ಪಡಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ.
ಸದ್ಯ ಸುಯೋಗ್ ಆಸ್ಪತ್ರೆಯ ಹಿರಿಯ ವ್ಯವಸ್ಥಾಪಕ ಅರುಣ್ ಕುಮಾರ್ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಅಥಣಿ: ಕೃಷ್ಣಾ ನದಿ ನೀರು ಪಾಲಾಗಿದ್ದ ಮೂವರ ಶವಗಳು ಪತ್ತೆ