ಮಂಡ್ಯ: ಕೆಆರ್ಎಸ್ನಿಂದ ತಮಿಳುನಾಡಿಗೆ ನೀರು ಬಿಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ಶ್ರೀರಂಗಪಟ್ಟಣದಲ್ಲಿ ರೈತರು ನದಿಗೆ ಇಳಿದು ಪ್ರತಿಭಟನೆ ಮಾಡಿದರು.
ರೈತ ಸಂಘದ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಮಂಡಳಿ ವಿರುದ್ಧ ಧಿಕ್ಕಾರ ಕೂಗಿ, ನದಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದರು. ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ನದಿಗೆ ಇಳಿದ ರೈತ ಮುಖಂಡರು, ಕೂಡಲೇ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು. ರೈತರನ್ನು ರಕ್ಷಣೆ ಮಾಡಬೇಕು, ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಜನ-ಜಾನುವಾರುಗಳಿಗೆ ಕುಡಿಯೋ ನೀರಿನ ಸಮಸ್ಯೆ ತಲೆದೋರಿದರೆ, ಸರ್ಕಾರವೇ ನೇರ ಹೊಣೆ ಎಂದು ಅರೆ ಬೆತ್ತಲೆ ಮೆರವಣಿಗೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.