ETV Bharat / state

ಬೇಡಿಕೆ ಈಡೇರಿಸುವಂತೆ ಕಬ್ಬು ಬೆಳೆಗಾರರ ಆಗ್ರಹ.. ಮಂಡ್ಯದಲ್ಲಿ ರೈತರ ಬೃಹತ್​ ಪ್ರತಿಭಟನೆ

ಮಂಡ್ಯದಲ್ಲಿ ತಮ್ಮ ಬೇಡಿಕೆಗೆ ಸ್ಪಂದಿಸದ ಸರ್ಕಾರದ ವಿರುದ್ಧ ರೈತರು ಬೃಹತ್​ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದರು. ಈ ಸಂದರ್ಭ ಪ್ರತಿಭಟನಾಕಾರರು ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.

farmers-protest-in-mandya
ಮಂಡ್ಯದಲ್ಲಿ ರೈತರ ಬೃಹತ್​ ಪ್ರತಿಭಟನೆ : ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಿ ಆಕ್ರೋಶ
author img

By

Published : Nov 16, 2022, 4:06 PM IST

ಮಂಡ್ಯ : ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಸರ್ಕಾರದ ವಿರುದ್ಧ ಬೃಹತ್​ ಪ್ರತಿಭಟನಾ ರ‍್ಯಾಲಿ ನಡೆಸಿದರು. ಇದೇ ವೇಳೆ ರೈತರು ಮುಖ್ಯಮಂತ್ರಿಗಳ ಪ್ರತಿಕೃತಿಯ ಮೆರವಣಿಗೆ ಮಾಡಿ, ದಹಿಸಿ ಆಕ್ರೋಶ ಹೊರಹಾಕಿದರು.

ಕಬ್ಬಿಗೆ 4500 ರೂ. ಬೆಲೆ ನಿಗದಿ ಪಡಿಸುವಂತೆ ಹಾಗೂ ಪ್ರತಿ ಲೀಟರ್ ಹಾಲಿಗೆ 40 ರೂ. ನಿಗದಿಪಡಿಸುವಂತೆ ಒತ್ತಾಯಿಸಿ ಕಳೆದ 10 ದಿನಗಳಿಂದ ರೈತರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸದಿರುವುದನ್ನು ಖಂಡಿಸಿ, ರೈತಸಂಘದ ನೇತೃತ್ವದಲ್ಲಿ ಮಂಡ್ಯ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಇದೇ ವೇಳೆ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಪ್ರತಿಭಟನಾ ರ‍್ಯಾಲಿಗೆ ನೂರಾರು ಸಂಖ್ಯೆಯಲ್ಲಿ ಟ್ರ್ಯಾಕ್ಟರ್, ಬೈಕ್​ಗಳಲ್ಲಿ ರೈತರು ಆಗಮಿಸಿದ್ದರು. ಈ ಪ್ರತಿಭಟನೆಗೆ ಜಿಲ್ಲೆಯಾದ್ಯಂತ ರೈತರು ಸ್ವಯಂ ಪ್ರೇರಿತರಾಗಿ ಆಗಮಿಸಿ ಬೆಂಬಲ ಸೂಚಿಸಿದರು.

ಸಿಎಂ ಪ್ರತಿಕೃತಿ ದಹಿಸಿ ಪ್ರತಿಭಟನೆ: ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದ ಘಟನೆಯೂ ನಡೆಯಿತು. ಮುಖ್ಯಮಂತ್ರಿಗಳು ಕೇವಲ ಸುಳ್ಳು ಭರವಸೆಗಳನ್ನು ನೀಡಿ ರೈತರನ್ನು ವಂಚಿಸುತ್ತಿದ್ದಾರೆಂದು ರೈತರು ಕಿಡಿಕಾರಿದರು.

ಪ್ರತಿಭಟನೆಗೆ ವಿವಿಧೆಡೆಯಿಂದ ಆಗಮಿಸಿದ ರೈತರು : ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ರೈತರು ಆಗಮಿಸಿದ್ದರು. ಹಸಿರು ಶಾಲು ಧರಿಸಿದ ರೈತರು ಮತ್ತು ಮಹಿಳೆಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರೈತರ ರ‍್ಯಾಲಿಯಿಂದಾಗಿ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಇದನ್ನೂ ಓದಿ : ರಾಷ್ಟ್ರೀಯ ಹೆದ್ದಾರಿ ಬಂದ್, ಉರುಳು ಸೇವೆ ಮಾಡಿ ಕಬ್ಬು ಬೆಳೆಗಾರರ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.