ETV Bharat / state

ತಮಿಳುನಾಡಿಗೆ ಮತ್ತೆ ನೀರು ಬಿಡಲು ಆದೇಶ : ಶ್ರೀರಂಗಪಟ್ಟಣದಲ್ಲಿ ರಸ್ತೆ ತಡೆದು ರೈತರ ಆಕ್ರೋಶ

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸೂಚಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ತಡೆದು ರೈತರ ಆಕ್ರೋಶ
ರಸ್ತೆ ತಡೆದು ರೈತರ ಆಕ್ರೋಶ
author img

By ETV Bharat Karnataka Team

Published : Sep 12, 2023, 10:23 PM IST

Updated : Sep 12, 2023, 11:05 PM IST

ಶ್ರೀರಂಗಪಟ್ಟಣದಲ್ಲಿ ರಸ್ತೆ ತಡೆದು ರೈತರ ಆಕ್ರೋಶ

ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ ಶ್ರೀರಂಗಪಟ್ಟಣದಲ್ಲಿ ರಸ್ತೆ ತಡೆ ನಡೆಸಿದರು. ನವ ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕೆಂದು ಸೂಚಿಸಿದ ಬೆನ್ನಲ್ಲೇ ರೈತ ಸಂಘದ ಆಶ್ರಯದಲ್ಲಿ ರೈತರು ಬೆಂಗಳೂರು – ಮೈಸೂರು ಹೆದ್ದಾರಿಗೆ ಇಳಿದು ಟೈರ್​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ವಾಹನ ಸಂಚಾರಕ್ಕೂ ಅಡ್ಡಿಪಡಿಸಿದರು.

ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವ ದೃಢ ನಿರ್ಧಾರ ಮಾಡಬೇಕು ಸಮಿತಿಯ ಆದೇಶವನ್ನು ಧಿಕ್ಕರಿಸಬೇಕು, ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ರೈತರು ಒತ್ತಾಯಿಸಿದರು. ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕೆಆರ್​ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಸದ್ಯಕ್ಕೆ ಕುಡಿಯುವ ನೀರಿಗೂ ಸಾಕಾಗುವುದಿಲ್ಲ. ವಾಸ್ತವ ಪರಿಸ್ಥಿತಿ ಪರಿಗಣಿಸದೇ ಏಕಾಏಕಿ ಮತ್ತೆ ನೀರು ಹರಿಸಿ ಎಂದಿರುವುದು ಅವೈಜ್ಞಾನಿಕ ಎಂದು ಕಿಡಿಕಾರಿದರು.

ಆಗಸ್ಟ್ ಮತ್ತು ಸೆಪ್ಟೆಂಬರ್​ನಲ್ಲಿ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಹೋಗಿದೆ, ಅಂದಾಜು 34 ಟಿಎಂಸಿ ನೀರು ಬಿಡಲಾಗಿದೆ, ಕರ್ನಾಟಕದ ಅಧಿಕಾರಗಳ ಮಾಹಿತಿ ನೀಡಿದರೂ ಸಹ ವಾಸ್ತವ ಪರಿಸ್ಥಿತಿ ತಿಳಿಯದೇ ನೀರು ಬಿಡುಗಡೆ ಮಾಡಿ ಎಂದು ಸೂಚಿಸಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕಾವೇರಿ ನದಿಗಿಳಿದು ರೈತರು ಹೋರಾಟ ನಡೆಸಿದರು.

ಮಂಡ್ಯದ ಸಂಜಯ್ ವೃತ್ತದಲ್ಲಿ ಬೆಂಗಳೂರು - ಮೈಸೂರು ಹೆದ್ದಾರಿ ತಡೆದು ರೈತರು ಹಾಗೂ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟಸಿದರು. ಕಾವೇರಿ ಸಮಿತಿ ಮುಂದೆ ಕರ್ನಾಟಕ ಸರ್ಕಾರ ಸೂಕ್ತ ವಾದ ಮಂಡಿಸುವಲ್ಲಿ ವಿಫಲವಾಗಿದೆ. ಕೇಂದ್ರ ಮಲತಾಯಿ ದೊರಣೆ ಇನ್ನೂ ಮುಂದುವರೆದಿದೆ. ಇವತ್ತಿನ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಅವೈಜ್ಞಾನಿಕವಾಗಿದೆ.

ರೈತರ ಕತ್ತು ಕೂಯ್ಯುವ ಆದೇಶ ನೀಡಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಅಳಿದು ಉಳಿದ ನೀರು ಉಳಿಸಿಕೊಳ್ಳುವ ಜವಾಬ್ದಾರಿ ರಾಜ್ಯ ಸರ್ಕಾರ ಮೇಲಿದೆ. ಕೇಂದ್ರ ಸರ್ಕಾರಕ್ಕೆ ಒತ್ತಡ ರಾಜ್ಯ ಸರ್ಕಾರ ತರಬೇಕು. ಸಂಸದರು ಇಷ್ಟು ದಿನದ ಮೌನವನ್ನ ಮುರಿಯಬೇಕು. ರೈತರ ಮತದಿಂದ ಅಧಿಕಾರಕ್ಕೆ ಬಂದವರು ನೀವು. ನೀವು ತಿನ್ನುತ್ತಿರುವ ಅನ್ನ ರೈತರದ್ದು. ನಾಳೆಯಿಂದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತೆ ಎಂದು ರೈತ ಮುಖಂಡೆ ಸುನಂದಾ ಜಯರಾಂ ಹೇಳಿಕೆ ನೀಡಿದರು.

ಇದನ್ನೂ ಓದಿ: Cauvery water dispute: 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಪ್ರಾಧಿಕಾರ ಹೇಳಿದೆ, ಆದರೆ ನಮ್ಮ ಬಳಿ ನೀರಿಲ್ಲ: ಡಿಕೆಶಿ

Last Updated : Sep 12, 2023, 11:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.