ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಗೂ ರೈತರ ಜೊತೆ ಅನುಚಿತವಾಗಿ ವರ್ತಿಸಿದ ಪೊಲೀಸ್ ಅಧಿಕಾರಿ ಅಮಾನತಿಗೆ ಆಗ್ರಹಿಸಿ ರೈತ ಮುಖಂಡರು ಹಾಗೂ ಕೆಲ ಸಂಘಟನೆ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮುಖಂಡರಾದ ರವೀಂದ್ರ, ಪ್ರೊ. ಮಹದೇವು, ತಮ್ಮೇಗೌಡ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆ ನಡೆಸಿ ಸಂಸದೆ ಸುಮಲತಾ ಅಂಬರೀಶ್ ತೇಜೋವಧೆ ಮಾಡುವ ರೀತಿಯಲ್ಲಿ ಟ್ರೋಲ್ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯ ಮಾಡಿದರು.
ಸಿಎಂ ಯಡಿಯೂರಪ್ಪ ಕಾರ್ಯಕ್ರಮದ ದಿನ ಮನವಿ ಸಲ್ಲಿಸಲು ಮುಂದಾದಾಗ ರೈತ ಮುಖಂಡರ ಜೊತೆ ಅನುಚಿತವಾಗಿ ವರ್ತನೆ ಮಾಡಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.