ETV Bharat / state

ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಸ್ಥಗಿತ: ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ಅಂತ್ಯ

author img

By ETV Bharat Karnataka Team

Published : Sep 9, 2023, 8:02 AM IST

Updated : Sep 9, 2023, 8:17 AM IST

ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರನ್ನು ಸ್ಥಗಿತ ಮಾಡಿದ ಕಾರಣ ತಾತ್ಕಾಲಿಕವಾಗಿ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿದ್ದ ಪ್ರತಿಭಟನಾ ಧರಣಿಯನ್ನು ಹಿಂಪಡೆಯಲಾಗಿದೆ.

ಧರಣಿ ಅಂತ್ಯ
ಧರಣಿ ಅಂತ್ಯ
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ಅಂತ್ಯ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರನ್ನು ಸ್ಥಗಿತ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿದ್ದ ಪ್ರತಿಭಟನಾ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ನಗರದ ಸರ್​ ಎಂ ವಿ ಪ್ರತಿಮೆ ಎದುರು ಕಳೆದ 9 ದಿನದಿಂದ ನಡಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ ಎಂದು ರೈತ ಹಿತ ರಕ್ಷಣಾ ಸಮಿತಿ ಘೋಷಿಸಿದೆ.

ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರವಾಗಿ ನೀರು ಹರಿಸುತ್ತಿದ್ದ ಸರ್ಕಾರದ ವಿರುದ್ಧ ಪ್ರತಿಭಟನಾ ಧರಣಿ ನಡೆಸುತ್ತ ಬಂದಿದ್ದೆವು. ಇದೀಗ ರಾಜ್ಯ ಸರ್ಕಾರ ನೆರೆರಾಜ್ಯಕ್ಕೆ ಹರಿಸುತ್ತಿದ್ದ ನೀರನ್ನು ಸ್ಥಗಿತ ಮಾಡಿರುವುದರಿಂದ ಹೋರಾಟವನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ ಎಂದು ಸಮಿತಿಯ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಸಮ್ಮುಖದಲ್ಲಿ ತಿಳಿಸಿದರು.

ಸಮಿತಿಯ ಮುಖಂಡರಾದ ಸುನಂದಾ ಜಯರಾಂ ಮಾತನಾಡಿ, ಕಾವೇರಿ ಚಳವಳಿ ಸಿಲ್ವರ್ ಜ್ಯುಬಿಲಿ ಪಾರ್ಕಿನ ಹಿಪ್ಪೆ ಮರದ ಕೆಳಗೆ ನಡೆಯುತ್ತಿತ್ತು. ಹಿಪ್ಪೆ ಮರದ ಚಳವಳಿ ಎಂದೇ ಪ್ರಸಿದ್ಧಿ ಪಡೆದಿತ್ತು. ಕಾವೇರಿ ಕೊಳ್ಳದ ರೈತರ ಹಿತ ಕಾಪಾಡುವುದೇ ನಮ್ಮ ಪ್ರಮುಖ ಉದ್ದೇಶ. ಹಾಗಾಗಿ ನಿರಂತರವಾಗಿ ಹೋರಾಡುತ್ತ ಬಂದಿದ್ದೇವೆ. ಯಾವುದೇ ಸರ್ಕಾರ ಬರಲಿ ಕಾವೇರಿ ವಿಚಾರದಲ್ಲಿ ಎಲ್ಲರ ವಿರುದ್ಧವೂ ಹೋರಾಟ ಮಾಡಿದ್ದೇವೆ, ಮುಂದೆಯೂ ಹೋರಾಟ ನಿರಂತರವಾಗಿರಲಿದೆ ಎಂದು ಸಂದೇಶ ರವಾನಿಸಿದರು.

ಸಂಸದರು ಜಿಲ್ಲೆಯ ರೈತರ ಕಾಪಾಡಲು ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಬೇಕಾಯಿತು. ಕಾವೇರಿ ವಿಚಾರದಲ್ಲಿ ಸಮಗ್ರ ಚರ್ಚೆಯಾಗಬೇಕಾಗಿದೆ. ಹಾಗಾಗಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಹೋರಾಟಗಾರರ ಸಭೆ ನಡೆಸುವಂತೆ ಮನವಿ ಮಾಡಿದರು. ಸಂಸದೆ ಸುಮಲತಾ ಅಂಬರೀಶ್ ಕೇಂದ್ರದ ಮೇಲೆ ಒತ್ತಡ ಹಾಕಲಿಲ್ಲ, ರೈತರ ಪರ ಹೋರಾಟ ಮಾಡಲಿಲ್ಲ. ಕಾವೇರಿ ಜಲಾಯನ ಪ್ರದೇಶದ ಎಂಟು ಜಿಲ್ಲೆಗಳ ಸಂಸದರು ಸೇರಿ ರಾಜ್ಯದ ಎಲ್ಲಾ ಪಕ್ಷದ ಸಂಸದರು ಬಾಯಿ ತೆರೆಯಲಿಲ್ಲ. ಅದ್ಯಾಕೋ ಬಾಯಿ ಬಂದ್ ಮಾಡಿಕೊಂಡಿದ್ದಾರೆ ನಮಗೆ ಗೊತ್ತಾಗುತ್ತಿಲ್ಲ ಎಂದರು.

ಸುಮಲತಾ ಅಂಬರೀಶ್ ಅವರದ್ದು ಸಂಸದರ ನಡೆ, ನಮ್ಮದು ಹೋರಾಟದ ನಡೆ. ಎಲ್ಲಾ ಸಂಘ ಸಂಸ್ಥೆಗಳ, ಹೋರಾಟಗಾರರ ಸಹಕಾರದಿಂದ ಕಾವೇರಿ ಹೋರಾಟವನ್ನು ಇಷ್ಟು ದಿನ ಮುನ್ನಡೆಸಿದ್ದೇವೆ. ತಾತ್ಕಾಲಿಕವಾಗಿ ಧರಣಿ ವಾಪಸ್ ಪಡೆದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರ ಸಹಕಾರ ಇರಲಿ ಎಂದು ಅವರು ಮನವಿ ಮಾಡಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಶಾಸಕ ರಮೇಶ್ ಬಾಬು ಬಂಡಿ ಸಿದ್ದೇಗೌಡ ಇತರರಿದ್ದರು.

ಇದನ್ನೂ ಓದಿ: ಮಂಡ್ಯ: ಕೆಆರ್​ಎಸ್​ ಅಣೆಕಟ್ಟೆ ವೀಕ್ಷಿಸಿದ ಬಿಜೆಪಿ ನಿಯೋಗ

Last Updated : Sep 9, 2023, 8:17 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.