ETV Bharat / state

ಕೊರೊನಾ ವಾರಿಯರ್​ಗೆ ಧಮ್ಕಿ ಆರೋಪ; ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಎಫ್​ಐಆರ್​! - ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ವಿಜಿ ಕುಮಾರ್

ಕೊರೊನಾ ಲಾಕ್​ಡೌನ್​ ಸಂಬಂಧ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ ಮೇಲೆ ದರ್ಪ ತೋರಿದ ಆರೋಪದ ಮೇಲೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

FIR against Mandya BJP district president
ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ
author img

By

Published : May 6, 2020, 7:34 PM IST

ಮಂಡ್ಯ: ಕೊರೊನಾ ವಾರಿಯರ್​ ಮಹಿಳಾ ಪೊಲೀಸ್ ಅಧಿಕಾರಿಗೆ ಧಮ್ಕಿ ಹಾಕಿ, ಪೋಸ್ಟಿಂಗ್ ಕೊಡಿಸೋದಿಲ್ಲ ಎಂದು ಬ್ಲ್ಯಾಕ್​ಮೇಲ್ ಮಾಡಿದ ಪ್ರಕರಣದಡಿ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಕೆ.ಆರ್.ಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ಆರ್.ಪೇಟೆ ಪಟ್ಟಣದಲ್ಲಿ ಕಳೆದ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ, ರಸ್ತೆ ಬದಿ ಕಾರು ನಿಲ್ಲಿಸಿಕೊಂಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ವಿಜಿ ಕುಮಾರ್​ಗೆ ಮನೆಗೆ ಹೋಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಕೋಪಗೊಂಡು ಪೊಲೀಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದರ್ಪ ತೋರಿದ ಜಿಲ್ಲಾಧ್ಯಕ್ಷನ ವಿರುದ್ದ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಐಪಿಸಿ ಸೆಕ್ಷನ್​ 353ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮಹಿಳಾ ಅಧಿಕಾರಿ ನೀಡಿದ ದೂರಿನ ಪ್ರತಿ ಈಟಿವಿ ಭಾರತಕ್ಕೆ ಲಭ್ಯವಾಗಿದ್ದು, ದೂರಿನಲ್ಲಿ ಅವರು ಯಾವುದೇ ಪೋಸ್ಟಿಂಗ್ ಸಿಗದಂತೆ ಮಾಡುವೆ, ನನ್ನ ಮೇಲೆ ಪೊಲೀಸರು ಹಲ್ಲೆ ಮಾಡಿದರು ಎಂದು ಸಿಎಂ ಸೇರಿದಂತೆ ಎಲ್ಲರಿಗೂ ದೂರು ನೀಡೋದಾಗಿ ಬೆದರಿಕೆ ಹಾಕಿದ ಬಗ್ಗೆ ಉಲ್ಲೇಖ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.