ಮಂಡ್ಯ: ಮಗಳನ್ನು ಪ್ರೀತಿ ಮಾಡಿದ್ದಕ್ಕಾಗಿ ಮನೆಯವರು ಯುವಕನನ್ನು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ಸಂಬಂಧ ಆರೋಪಿಗಳಾದ ನಗರಸಭೆ ಸದಸ್ಯ ಶಿವಲಿಂಗು, ಆತನ ಪತ್ನಿ ಅನುರಾಧಾ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ಸಂಬಂಧ 17 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಪೈಕಿ ಐವರನ್ನು ವಶಕ್ಕೆ ಪಡೆಯಲಾಗಿದೆ.
ಏನಿದು ಪ್ರಕರಣ?
ಕಲ್ಲಹಳ್ಳಿಯ ದರ್ಶನ್ (17) ಅದೇ ಬಡಾವಣೆಯ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನಂತೆ. ಈ ಕಾರಣಕ್ಕೆ ಯುವತಿ ಮನೆಯವರು ನಿನ್ನೆ ದರ್ಶನ್ನನ್ನು ಮನೆಗೆ ಎಳೆದೊಯ್ದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಯುವತಿಯ ತಂದೆ ಕಲ್ಲಹಳ್ಳಿ ಶಿವಲಿಂಗು ಎಂಬುವರು ಹಲ್ಲೆ ಮಾಡಿದ್ದು, ಇವರು ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಗಾಯಾಳು ಯುವಕನನ್ನು ನಿನ್ನೆ ಮುಂಜಾನೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾದಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ದರ್ಶನ್ ಮೃತಪಟ್ಟಿದ್ದ.