ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದ 15 ಸಾವಿರ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕ್ಷೇತ್ರದ ಬಡ ಕುಟುಂಬಗಳಿಗೆ ಆಹಾರ ಕಿಟ್ (ತಲಾ 5 ಕೆ.ಜಿ ಅಕ್ಕಿ & 10 ಕೆ.ಜಿ ತರಕಾರಿ) ವಿತರಿಸಲಾಗುವುದು ಎಂದರು.
ಇದನ್ನೂ ಓದಿ : ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಸಚಿವ ಡಾ.ಕೆ.ಸಿ ನಾರಾಯಣಗೌಡ ಭೇಟಿ, ಪರಿಶೀಲನೆ
ಕೋವಿಡ್ ಹರಡುವಿಕೆ ತಡೆಗೆ ಸರ್ಕಾರ ಕರ್ಫ್ಯೂ ಜಾರಿ ಮಾಡಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಹಾಗೂ ನಿರಾಶ್ರಿತರ ಬದುಕು ಬೀದಿಗೆ ಬಿದ್ದಿದೆ. ಅಂತವರಿಗೆ ಆಹಾರ ಪದಾರ್ಥಗಳನ್ನು ನೀಡಲು ನಿರ್ಧರಿಸಿದ್ದೇನೆ. ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡಲು ಎಲ್ಲರೂ ಸಹಕರಿಸಿ. ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ, ತಾಲೂಕಿನ ಪ್ರತಿ ಗ್ರಾಮಗಳಿಗೂ ತೆರಳಿ ಆಹಾರ ಸಾಮಗ್ರಿಗಳ ವಿತರಣೆಗೆ ಸಿದ್ದತೆ ಮಾಡಿಕೊಂಡಿದ್ದೇವೆ. ಪ್ರತಿ ಗ್ರಾಮಕ್ಕೂ ನಾವೇ ಬಂದು ಆಹಾರ ಕಿಟ್ ತಲುಪಿಸುತ್ತೇವೆ ಎಂದು ಹೇಳಿದರು.