ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಹೋದರ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ (83) ವಿಧಿವಶರಾಗಿದ್ದಾರೆ.
ಶಂಕರ್ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಂಕರ್ ಎಂಎಲ್ಸಿ ಆಗಿದ್ದರು. ಸ್ವಗ್ರಾಮ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.