ಮಂಡ್ಯ: ಮುಂದಿನ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ನಾನೇ ಅಭ್ಯರ್ಥಿ ಎಂದು ಟವಲ್ ಹಾಕಿದ್ದೇನೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಲೂ ಜೆಡಿಎಸ್ ಪಕ್ಷದಲ್ಲೇ ಇದ್ದೇನೆ, ಮುಂದೆಯೂ ಇರುತ್ತೇನೆ. ಕೆಲವರು ನನ್ನನ್ನು ಪಕ್ಷದಿಂದ ಕಳಿಸಲು ನೋಡುತ್ತಿದ್ದಾರೆ. ಆದರೆ ನಾನು ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದರು. ಈಗಾಗಲೇ ನಾನು ಎಲ್ಲಾ ಪಕ್ಷಗಳನ್ನು ನೋಡಿದ್ದೇನೆ. ಈ ಪಕ್ಷದಲ್ಲೇ ಇದ್ದು ಟಿಕೆಟ್ ಕೇಳುತ್ತೇನೆ ಎಂದ ಅವರು, ಮುಂದಿನ ಚುನಾವಣೆಗೆ ನಾನೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಹೇಳಿದರು.
ಓದಿ: ಸಿಸಿಬಿ ತನಿಖಾಧಿಕಾರಿಗಳ ಮುಂದೆ ಹಾಜರಾದ ನಟಿ ರಾಗಿಣಿ
ಒಂದು ವೇಳೆ ಪಕ್ಷ ಟಿಕೆಟ್ ಕೊಡದಿದ್ದರೆ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠರಿಗೆ ಮಾಜಿ ಸಂಸದ ಎಚ್ಚರಿಕೆ ನೀಡಿದರು.