ಮಂಡ್ಯ: ಮಾಜಿ ಸಂಸದ ಶಿವರಾಮೇಗೌಡರ ಪುತ್ರ ಚೇತನ್ ಗೌಡ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರ್ಪಡೆಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಜೆಡಿಎಸ್ ಪಕ್ಷವನ್ನು ಶೀಘ್ರದಲ್ಲಿ ಸೇರ್ಪಡೆಗೊಳ್ಳಲಿದೇನೆ. ಬಿಂಡಿಗನವಿಲೆ ಜಿಲ್ಲಾ ಪಂಚಾಯಿತಿ ಸ್ವಕ್ಷೇತ್ರವಾಗಿದ್ದು, ಈ ಬಾರಿ ಸಾಮಾನ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾನೂ ಕೂಡಾ ಆಕಾಂಕ್ಷಿಯಾಗಿದ್ದು, ಪಕ್ಷದ ನಾಯಕರು ಮತ್ತು ಜಿಲ್ಲೆಯ ಮುಖಂಡರು ಹಾಗೂ ನಮ್ಮ ಶಾಸಕ ಸುರೇಶ್‌ಗೌಡರನ್ನು ಭೇಟಿ ಮಾಡಿ ಬೆಂಬಲ ಕೋರುತ್ತೇನೆ ಎಂದರು.
ಬಳಿಕ ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿ, ನಾನೂ ಕೂಡ ಹಿಂದೆ ಜಿಲ್ಲಾ ಪಂಚಾಯಿತಿಯಲ್ಲಿ ಗೆದ್ದು ನಂತರ ಶಾಸಕನಾಗಿದ್ದೆ. ಒಂಬತ್ತು ಚುನಾವಣೆಗಳನ್ನು ಎದುರಿಸಿ ರಾಜಕೀಯದಲ್ಲಿ ನೆಲೆಗೊಂಡಿದ್ದೇನೆ. ಬಿಂಡಿ ಗನವಿಲೆ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾಗಿದ್ದು, ಅಲ್ಲಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದರು.
ಕಾರ್ಯಕರ್ತರು ಮತ್ತು ಅಭಿಮಾನಿಗಳು ಚೇತನ್‌ಗೌಡರವರನ್ನು ಅಭ್ಯರ್ಥಿ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ. ನಾನು ಕೂಡ ಬೆಂಬಲ ಕೋರುತ್ತೇನೆ. ವರಿಷ್ಠರು, ಕ್ಷೇತ್ರದ ಶಾಸಕರು, ಜಿಲ್ಲಾಮಟ್ಟದ ನಾಯಕರ ಜೊತೆ ಚರ್ಚಿಸುತ್ತೇನೆ. ನನ್ನ ಮಗನ ರಾಜಕೀಯ ಬೆಳೆವಣಿಗೆಗೆ ನಿಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದರು.