ಮಂಡ್ಯ: ಮಂಡ್ಯದ ಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಸಂಸದೆ ದಿವಂಗತ ಜಿ. ಮಾದೇಗೌಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಭಾರಿ ವಿರೋಧ ವ್ಯಕ್ತವಾಗಿದೆ. ಅಲ್ಲದೇ, ಶಿವರಾಮೇಗೌಡರ ಪ್ರತಿಕೃತಿ ದಹನ ಮಾಡುವ ಮೂಲಕ ಅಭಿಮಾನಿಗಳು ಮಂಡ್ಯದ ಕೆ ಎಂ ದೊಡ್ಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಶಿವರಾಮೇಗೌಡ ಜೆಡಿಎಸ್ ಮಹಿಳಾ ಕಾರ್ಯಕರ್ತೆಯೊಬ್ಬರ ಜೊತೆ ಮಾತನಾಡುವ ವೇಳೆಯಲ್ಲಿ ದಿವಂಗತ ಜಿ.ಮಾದೇಗೌಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಶಿವರಾಮೇಗೌಡರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಓದಿ: ದಿ. ಮಾದೇಗೌಡರ ಬಗ್ಗೆ ಅವಹೇಳನ : ಜೆಡಿಎಸ್ನಿಂದ ಶಿವರಾಮೇಗೌಡ ಉಚ್ಚಾಟನೆ
ಇದರಿಂದ ರೊಚ್ಚಿಗೆದ್ದ ಜಿ.ಮಾದೇಗೌಡರ ಅಭಿಮಾನಿಗಳು ಕೆ ಎಂ ದೊಡ್ಡಿಯಲ್ಲಿ ಶಿವರಾಮೇಗೌಡರ ಪ್ರತಿಕೃತಿ ದಹಿಸಿದರು. ಮಾದೇಗೌಡರ ಬಗ್ಗೆ ತುಚ್ಛವಾಗಿ ಮಾತನಾಡಿದ್ದ ಶಿವರಾಮೇಗೌಡರ ಪ್ರತಿಭಟನೆ, ಆಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ ತಕ್ಷಣ ಎಚ್ಚೆತ್ತುಕೊಂಡ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಶಿವರಾಮೇಗೌಡರನ್ನು ಪಕ್ಷದಿಂದ ಉಚ್ಚಾಟಿಸಿದ್ದಾರೆ.
ಜಾಹೀರಾತು-ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ