ETV Bharat / state

ಮಾಜಿ ಸಂಸದ ಮಾದೇಗೌಡ ವಿಧಿವಶ: ಇಂದು ನಡೆಯಲಿರುವ ಅಂತ್ಯಕ್ರಿಯೆ

ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ ಜಿ. ಮಾದೇಗೌಡ ನಿಧನರಾಗಿದ್ದು, ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.

G Madegowda
G Madegowda
author img

By

Published : Jul 18, 2021, 5:05 AM IST

ಮಂಡ್ಯ: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ, ಕಾಂಗ್ರೆಸ್​ ಮುಖಂಡ, ಮಾಜಿ ಸಂಸದ ಜಿ. ಮಾದೇಗೌಡ(94) ನಿನ್ನೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಭಾರತೀನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ಪಯಣ ಮುಗಿಸಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2:30ರ ಸುಮಾರಿಗೆ ಹನುಮಂತನಗರದಲ್ಲಿ ನಡೆಯಲಿದೆ ಎಂದು ಈಗಾಗಲೇ ಪುತ್ರ ಮಧು. ಜಿ ಮಾದೇಗೌಡ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಕಾವೇರಿ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ಕೊನೆಯುಸಿರು

ಗುರುದೇವರಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಇಂದು ಬೆಳಗ್ಗೆ ಮಂಡ್ಯದ ಬಂಧೀಗೌಡ ಬಡಾವಣೆಯಲ್ಲಿ ಮಾದೇಗೌಡರ ನಿವಾಸಕ್ಕೆ ಪಾರ್ಥಿವ ಶರೀರ ತರಲಾಗುತ್ತಿದ್ದು, ನಂತರ ಗಾಂಧಿ ಭವನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಂದ ಮದ್ದೂರು ಮುಖಾಂತರ ಹುಟ್ಟೂರು ಗುರುದೇವರಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಜತೆಗೆ ಭಾರತಿ ಕಾಲೇಜು ಅವರಣದಲ್ಲಿಯೂ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ತದನಂತರ ಮಧ್ಯಾಹ್ನ 2.30ರ ಸುಮಾರಿಗೆ ಹನುಮಂತನಗರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸೋಲಿಲ್ಲದ ಸರದಾರ

ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಮೂರು ಬಾರಿ ಶಾಸಕರಾಗಿದ್ದರು. ನಂತರ 1989 ಹಾಗೂ 1991ರಲ್ಲಿ ಎರಡು ಬಾರಿ ಲೋಕಸಭೆಗೆ ಸ್ಪರ್ಧಿಸಿ, ಅಲ್ಲಿಯೂ ಜಯಗಳಿಸಿ ಸೋಲಿಲ್ಲದ ಸರದಾರರಾಗಿ ಗುರುತಿಸಿಕೊಂಡಿದ್ದರು. ಜತೆಗೆ ಗುಂಡೂರಾವ್​​ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1996ರಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದ ಸಂದರ್ಭದಲ್ಲಿ ಸಂಸತ್​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟದಲ್ಲಿ ಭಾಗಿಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.