ಮಂಡ್ಯ: ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ.ಮಾದೇಗೌಡ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ ಎಂ ದೊಡ್ಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಗುರುದೇವರಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ : ನಾಳೆ ಬೆಳಗ್ಗೆ ಮಂಡ್ಯದ ಬಂಧೀಗೌಡ ಬಡಾವಣೆಯಲ್ಲಿರುವ ಮಾದೇಗೌಡರ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗುವುದು. ನಂತರ ಗಾಂಧಿ ಭವನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲಿಂದ ಮದ್ದೂರು ಮುಖಾಂತರ ಹುಟ್ಟೂರು ಗುರುದೇವರಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.
ಜತೆಗೆ ಭಾರತಿ ಕಾಲೇಜು ಅವರಣದಲ್ಲಿಯೂ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಹನುಮಂತನಗರದಲ್ಲಿ ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ಜಿ.ಮಾದೇಗೌಡ ಅವರ ಪುತ್ರ ಮಧು.ಜಿ.ಮಾದೇಗೌಡ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕಾವೇರಿ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ಕೊನೆಯುಸಿರು