ಮಂಡ್ಯ: ಪ್ರೀತಿಸು, ಪ್ರೀತಿಸು.. ಅಂತ ನಿತ್ಯ ಪೀಡಿಸುತ್ತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತ ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹೆಬ್ಬರಳು ಗ್ರಾಮದಲ್ಲಿ ನಡೆದಿದೆ.
ಪೂಜಾ (13) ಮೃತ ಬಾಲಕಿ. ಅದೇ ಗ್ರಾಮದ ರಜತ್ ಎಂಬ ಯುವಕ ಫೋನ್ನಲ್ಲಿ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಬಾಲಕಿ ಕೆರೆಗೆ ಹಾರಿ ಸಾವಿಗೆ ಶರಣಾಗಿದ್ದಾಳೆ.
ಓದಿ: ಅಪೋಲೋ ಆಸ್ಪತ್ರೆಯಿಂದ ಬಿಡುಗಡೆಯಾದ ಸೂಪರ್ ಸ್ಟಾರ್ ರಜಿನಿಕಾಂತ್
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಪೋಷಕರು ಯುವಕನ ವಿರುದ್ಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.