ಮಂಡ್ಯ: ಗ್ರಾಮ ಪಂಚಾಯತ್ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 2,067 ನಾಮಪತ್ರಗಳು ಸಲ್ಲಿಕೆಯಾಗಿವೆ.
ಡಿ. 11 ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ. 7 ರಂದು ಜಿಲ್ಲಾಧಿಕಾರಿಗಳು ಚುನಾವಣೆಯ ಬಗ್ಗೆ ಅಧಿಸೂಚನೆ ಹೊರಡಿಸಿದ ದಿನದಿಂದ ಈವರೆಗೆ 2,067 ಮಂದಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಪರಿಸರ ಸ್ನೇಹಿ ಕ್ರಿಸ್ಮಸ್ ಆಚರಣೆ: ಪೇಪರ್ಸೀಡ್ ಸಾಂತಾಕ್ಲಾಸ್, ನಕ್ಷತ್ರ, ಘಂಟೆ ತಯಾರಿ
ಮಂಡ್ಯ ತಾಲೂಕಿನ 46 ಗ್ರಾ.ಪಂ. ವ್ಯಾಪ್ತಿಯಲ್ಲಿ 710 ನಾಮಪತ್ರಗಳು ಸಲ್ಲಿಕೆಯಾಗಿದ್ರೆ, ಮದ್ದೂರು ತಾಲೂಕಿನ 42 ಗ್ರಾ.ಪಂ. ವ್ಯಾಪ್ತಿಯಲ್ಲಿ 704, ಮಳವಳ್ಳಿ ತಾಲೂಕಿನ 38 ಗ್ರಾ.ಪಂ. ಗಳಲ್ಲಿ 653 ಸೇರಿದಂತೆ ಒಟ್ಟು 2,067 ಮಂದಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.