ಮಂಡ್ಯ: ಜಿಲ್ಲೆಯ ಗಡಿ ಭಾಗವಾದ ಮದ್ದೂರಿಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಚಿವ ಕೆ.ಸಿ.ನಾರಾಯಣ ಗೌಡ ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ತಾಲ್ಲೂಕಿನ ನಿಡಘಟ್ಟ ಗ್ರಾಮ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ಕರಂದ್ಲಾಜೆ ಪರಿಶೀಲನೆ ನಡೆಸಿದರು.
ಬೈಕ್ ರ‍್ಯಾಲಿ ಮೂಲಕ ಸ್ವಾಗತ:
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬೈಕ್ ರ‍್ಯಾಲಿ ಮೂಲಕ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸಚಿವ ಕೆ.ಸಿ.ನಾರಾಯಣ ಗೌಡ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.