ಮಂಡ್ಯ: ನಿಮಿಷಾಂಭ ದೇವಿ ವರ್ಧಂತಿ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವ ಜಿ.ಟಿ. ದೇವೇಗೌಡ ದಂಪತಿ ವಿಶೇಷ ಪೂಜೆ ಸಲ್ಲಿಸಿದರು.
ನಿಮಿಷಾಂಭ ದೇವಿಯ ದರ್ಶನಕ್ಕೆ ಆಗಮಿಸಿದ ಸಚಿವರಿಗೆ ದೇವಾಲಯದ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ಈ ವೇಳೆ ಶ್ರೀರಂಗಪಟ್ಟಣ ತಹಶೀಲ್ದಾರ್ ನಾಗ ಪ್ರಶಾಂತ್ ಸಚಿವರ ಜೊತೆ ಇದ್ದರು.
ಭಕ್ತರ ದಂಡು
ವರ್ಧಂತಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು.ವಿಶೇಷವಾಗಿ ದೇವಿಗೆ 101 ಕಳಸಗಳ ಅಭಿಷೇಕ ನಡೆಯಿತು.ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ದೂರದೂರಿನಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ಕ್ಷೇತ್ರಕ್ಕೆ ಆಗಮಿಸಿದ ಭಕ್ತರಿಗೆ ಮುಜರಾಯಿ ಇಲಾಖೆ ಮೂಲ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಿದೆ.