ETV Bharat / state

ಮಂಡ್ಯದಲ್ಲಿ ಬೂಟ್ ಪಾಲಿಶ್ ಮಾಡುವ ಮೂಲಕ ಅತಿಥಿ ಉಪನ್ಯಾಸಕರ ಪ್ರತಿಭಟನೆ - ಮಂಡ್ಯದಲ್ಲಿ ಬೂಟ್ ಪಾಲಿಶ್ ಮೂಲಕ ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು

ವಿದ್ಯಾರ್ಥಿಗಳ ಭವಿಷ್ಯ ಹಾಗು ನಮ್ಮ ಭವಿಷ್ಯದ ಜೊತೆ ಸರ್ಕಾರ ಆಟವಾಡುತ್ತಿದೆ. ತಕ್ಷಣವೇ ಎಚ್ಚೆತ್ತು ನಮ್ಮ ಸಮಸ್ಯೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಅತಿಥಿ ಉಪನ್ಯಾಸಕರು ಎಚ್ಚರಿಕೆ ನೀಡಿದರು.

guest-lecturers-protest-in-mandya
ಮಂಡ್ಯದಲ್ಲಿ ಬೂಟ್ ಪಾಲಿಶ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು..
author img

By

Published : Jan 3, 2022, 8:35 PM IST

ಮಂಡ್ಯ: ಬೂಟ್ ಪಾಲಿಶ್ ಮಾಡುವ ಮೂಲಕ ಅತಿಥಿ ಉಪನ್ಯಾಸಕರು ಮಂಡ್ಯದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕರು, ಕೇವಲ 5 ರೂಪಾಯಿಗಳಿಗೆ ಬೂಟ್ ಪಾಲಿಶ್ ಮಾಡುವ ವಿಭಿನ್ನ ಪ್ರತಿಭಟನೆಗೆ ಮುಂದಾದರು.

ನಿರಂತರ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಂಡು ಬಗೆಹರಿಸಬೇಕು. ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸಬೇಕು. ವಿದ್ಯಾರ್ಥಿಗಳ ಭವಿಷ್ಯ ಹಾಗು ನಮ್ಮ ಭವಿಷ್ಯದ ಜೊತೆ ಸರ್ಕಾರ ಆಟವಾಡುತ್ತಿದೆ. ತಕ್ಷಣವೇ ಎಚ್ಚೆತ್ತು ನಮ್ಮ ಸಮಸ್ಯೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆ: ಇಂದಿನ ಕೊರೊನಾ ಅಪ್​ಡೇಟ್​ ಹೀಗಿದೆ..

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.