ETV Bharat / state

ಮಂಡ್ಯದಲ್ಲಿ ಎತ್ತಿನ ಗಾಡಿ ಸ್ಪರ್ಧೆಗೆ ನಿಖಿಲ್​ ಕುಮಾರಸ್ವಾಮಿ ಚಾಲನೆ

ಮಂಡ್ಯ ಜಿಲ್ಲೆಯ ಹಲಗೂರು ಸಮೀಪದ ಹೊಸಪುರ ಗ್ರಾಮದ ಹೊರವಲಯದಲ್ಲಿ ನಡೆದ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ನಿಖಿಲ್​ ಕುಮಾರಸ್ವಾಮಿ ಉದ್ಘಾಟಿಸಿ ಸ್ಪರ್ಧಿಗಳಿಗೆ ಶುಭ ಹಾರೈಸಿದ್ರು. ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 65 ಎತ್ತಿನಗಾಡಿಗಳು ಭಾಗವಹಿಸಿದ್ದವು.

hackery race in mandya
ಎತ್ತಿನಗಾಡಿ ಸ್ಪರ್ಧೆ
author img

By

Published : Jan 30, 2021, 12:48 PM IST

ಮಂಡ್ಯ: ಹುಚ್ಚೇಗೌಡನದೊಡ್ಡಿ ಕಾವೇರಿ ಕನ್ನಡ ಯುವಕ ಸಂಘ ಹಾಗೂ ಶ್ರೀ ಬಸವೇಶ್ವರ ಗೆಳೆಯರ ಬಳಗದ ವತಿಯಿಂದ ಮೊದಲನೇ ವರ್ಷದ ರಾಜ್ಯ ಮಟ್ಟದ ಎತ್ತಿನ ಗಾಡಿ ಓಟದ ಸ್ಪರ್ಧೆ ನಡೆಯಿತು.

ಎತ್ತಿನಗಾಡಿ ಸ್ಪರ್ಧೆ
ಹಲಗೂರು ಸಮೀಪದ ಹೊಸಪುರ ಗ್ರಾಮದ ಹೊರವಲಯದಲ್ಲಿ ನಡೆದ ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ 65 ಎತ್ತಿನಗಾಡಿಗಳು ಭಾಗವಹಿಸಿದ್ದವು. ಎತ್ತಿನಗಾಡಿ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಆಧುನಿಕತೆಯ ಭರದಲ್ಲಿ ಗ್ರಾಮೀಣ ಕ್ರೀಡೆಗಳು ನಶಿಸುವ ಹಂತ ತಲುಪುತ್ತಿದ್ದು, ಯುವಕರು ಗ್ರಾಮೀಣ ಕ್ರೀಡೆಗಳ ಉಳಿವಿಗೆ ಮುಂದಾಗಿರುವುದು ಶ್ಲಾಘನೀಯ ಎಂದರು. ಯುವಕರು ಕರೆ ಮಾಡಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಳಿದ್ರು, ನಾನು ಪಾಲ್ಗೊಂಡಿದ್ದೇನೆ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದ್ರು.
ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಪಂಚಾಯಿತಿ ಸದಸ್ಯ ರವಿ ಕಂಸಾಗರ, ಗ್ರಾಮ ಪಂಚಾಯಿತಿ ಸದಸ್ಯ ನಿಂಗರಾಜು, ಆನಂದ್, ರಾಜು, ಶ್ರೀನಿವಾಸ್, ರವೀಶ್, ಕಿರುತೆರೆ ನಟ ಹರ್ಷ ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.