ಮಂಡ್ಯ: ಸಿಸಿಬಿಯಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ ಕುರಿತಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅದು ಯಾರೋ ನನಗೆ ಗೊತ್ತಿಲ್ಲ ಎಂದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಲೆಕೆರೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮ ಮುಗಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ರಾಧಿಕಾ ವಿಚಾರವಾಗಿ, 'ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ' ಎಂದು ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಇದನ್ನೂ ಓದಿ: ನಾನು ಯಾರಿಗೂ ಮೋಸ ಮಾಡಿಲ್ಲ, ಬೇರೆಯವರಿಂದ ನಮಗೆ ಮೋಸ ಆಗಿದೆ : ರಾಧಿಕಾ ಕುಮಾರಸ್ವಾಮಿ