ಮಂಡ್ಯ : ಕಾಂಗ್ರೆಸ್ ದಲಿತ ಸಿಎಂ ರೇಸ್ ಕುರಿತು ಪ್ರತಿಕ್ರಿಯಿಸಿರು ಮಾಜಿ ಸಿಎಂ ಕುಮಾರಸ್ವಾಮಿ, ದಲಿತರು ಸಿಎಂ ಆಗೋದನ್ನು ನಾನು ತಪ್ಪಿಸಲಿಲ್ಲ. ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದೇ ಈಗ ಮತ್ತೆ ಸಿಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರಲ್ಲ ಅವರು ಎಂದು ಮಾಜಿ ಸಿಎಂ ಸಿದ್ದರಾಮಯ್ಯರ ಹೆಸರು ಹೇಳದೆ ವ್ಯಂಗ್ಯವಾಡಿದ್ದಾರೆ.
ಯಾರೂ ಮಾಡದೇ ಇರೋ ಸಾಧನೆ ಮಾಡಿ, ನಾನಿದ್ದರೇ ಕಾಂಗ್ರೆಸ್ ಅಂತ ಹೇಳ್ತಾರಲ್ಲ. 130 ಸೀಟಿನಲ್ಲಿ ಮುಖ್ಯಮಂತ್ರಿಯಾಗಿ 78ಕ್ಕೆ ಬಂದರಲ್ಲ ಅವರು ದಲಿತ ಸಿಎಂ ಆಗೋದನ್ನು ತಪ್ಪಿಸಿದ್ದು ಎಂದು ಮಾತಿನಲ್ಲೇ ಕುಟುಕಿದ್ದಾರೆ. ದಲಿತರನ್ನು ಸಿಎಂ ಮಾಡಬೇಕು ಎಂದು ಈವರೆಗೆ ಕಾಂಗ್ರೆಸ್ನವರಿಗೆ ಗೊತ್ತಿರಲಿಲ್ವ.? ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದಾಗ ಗೊತ್ತಾಗಲಿಲ್ವ.? ಈಗ ದಲಿತರ ಹೆಸರು ಬರ್ತಿದ್ದೀಯಾ? ಎಂದು ಪ್ರಶ್ನಿಸಿದರು.
‘ಮನ್ಮುಲ್ ಸೂಪರ್‌ಸೀಡ್ ಬೇಡ’
ನೀವು ಯಾವ ತನಿಖೆಯಾದರೂ ಮಾಡಿಕೊಳ್ಳಿ. ಆದ್ರೆ, ಆಡಳಿತ ಮಂಡಳಿ ಸೂಪರ್‌ಸೀಡ್ ಮಾಡೋದು ಬೇಡ ಎಂದು ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇವೆ. ಹಗರಣ ಬಯಲಿಗೆಳೆದ ಆಡಳಿತ ಮಂಡಳಿ ವಿರುದ್ಧವೇ ಕ್ರಮ ಯಾಕೆ ಎಂದು ಸಿಎಂಗೆ ಹೇಳಿದ್ದೇವೆ ಎಂದರು. ಇವರಿಗೆ ಮಾನ-ಮರ್ಯಾದೆ ಇದ್ರೆ ಹಗರಣದ ತನಿಖೆ ನಡೆಸೋ ಬಗ್ಗೆ ಮಾತನಾಡಲಿ ಎಂದರು.
‘ಹಲ್ಲು ಹಿಡಿದು ಮಾತನಾಡಲಿ’
ಮಾಜಿ ಸಚಿವ ಚೆಲುವರಾಯಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಇವರ ಅಪ್ಪಣೆ ತಗೊಂಡು ನಾನು ಮಂಡ್ಯಕ್ಕೆ ಬರಬೇಕಿಲ್ಲ. ನನ್ನ ಜನ ಬಡವರಿದ್ದಾರೆ, ಈ ಜಿಲ್ಲೆಯ ಜನ ಋಣ ಹೊರಿಸಿದ್ದಾರೆ. ನನಗೆ ಗೌರವ ಕೊಟ್ಟಿರೋ ಲಕ್ಷಾಂತರ ಜನ ಇಲ್ಲಿದ್ದಾರೆ. ಇಷ್ಟೇ ಅಲ್ಲದೇ ಜೀವ ಮಣ್ಣಿಗೋಗೊವರೆಗೂ ಮಂಡ್ಯ ಜಿಲ್ಲೆಗೆ ಬರ್ತೀನಿ. ಯಾರಾದರೂ ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಖಾರವಾಗಿ ನುಡಿದರು.
ಏನ್ ಇವರ ಋಣ ತಿಂದಿದ್ದವಾ, ಹಲ್ಲು ಹಿಡಿದು ಮಾತನಾಡಲಿ. ಸೋತು ಮನೆಯಲ್ಲಿ ಮಲಗಿದ್ದವರನ್ನ ಎಂಪಿ ಮಾಡಿದೆ. ಸ್ವಂತ ದುಡಿಮೆಯಲ್ಲಿ ಪಾರ್ಲಿಮೆಂಟ್‌ಗೆ ಹೋಗಿದ್ನಾ ಇವನು? ಎಂದು ಚೆಲುವರಾಯಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ನನ್ನ ಬಡ್ಡಿ ಮಗ ಎನ್ನುತ್ತಾನಲ್ಲ, ಆತ ನಮಗೆ ಬಡ್ಡಿ ಕೊಡುವುದಿರಲಿ, ನಾನು ಕೊಟ್ಟ ಅಸಲೇ ವಾಪಸ್ ಕೊಟ್ಟಿಲ್ಲ ಎಂದರು.
ಓದಿ: 'ಕಾಸರಗೋಡಿನ ಗ್ರಾಮಗಳ ಹೆಸರು ಬದಲಾವಣೆ ಮುನ್ನೆಲೆಗೆ ಬಂದ ಹಿಂದೆ ಯಾವ ತಂತ್ರವಿತ್ತೋ?'