ಮಂಡ್ಯ: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಮುಖ್ಯ ಪೇದೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬಸರಾಳು ಬಳಿ ನಡೆದಿದೆ.
ವೆಂಕಟೇಶ್ (50) ಮೃತಪಟ್ಟ ಪೇದೆ. ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ವೆಂಕಟೇಶ್, ರಾತ್ರಿ ಚುಂಚನಗಿರಿಯ ಜಾತ್ರೆಯ ಕರ್ತವ್ಯ ಮುಗಿಸಿ ಮಂಡ್ಯಕ್ಕೆ ವಾಪಸ್ಸು ಬರುವಾಗ ದುರ್ಘಟನೆ ಸಂಭವಿಸಿದೆ.
ಸದ್ಯ ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ. ಮೃತ ದೇಹವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.