ETV Bharat / state

ವರುಣನಾರ್ಭಟಕ್ಕೆ ಮದ್ದೂರು ತತ್ತರ: ಧರೆಗುರುಳಿದ ವಿದ್ಯುತ್ ಕಂಬಗಳು, 9ಕ್ಕೂ ಹೆಚ್ಚು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಟ್

ವಿದ್ಯುತ್​ ಕಂಬಗಳ ಜೊತೆಗೆ 15ಕ್ಕೂ ಹೆಚ್ಚು ತೆಂಗಿನ ಮರಗಳು ಕೂಡ ಧರೆಗುರುಳಿ ಅವಾಂತರ ಸೃಷ್ಟಿಸಿವೆ.

Power poles toppled down
ಧರೆಗುರುಳಿದ ವಿದ್ಯುತ್ ಕಂಬಗಳು
author img

By

Published : Jun 10, 2023, 2:24 PM IST

ಮಂಡ್ಯ: ಕಳೆದ ವರ್ಷ ಮೇ ಅಂತ್ಯದಲ್ಲೇ ರಾಜ್ಯವನ್ನು ಪ್ರವೇಶಿಸಿತ್ತು. ಈ ವರ್ಷ ಮುಂಗಾರು ತಡವಾಗಿ ಆಗಮಿಸುತ್ತಿದೆ. ಜೂನ್ ಮೊದಲ ವಾರದಲ್ಲಿ ಆರಂಭವಾಗಬೇಕಿದ್ದ ಮುಂಗಾರು ಮಳೆ ಹತ್ತು ದಿನಗಳ ಕಾಲ ತಡವಾಗಿ ರಾಜ್ಯಕ್ಕೆ ಕಾಲಿಟ್ಟಿದೆ. ಮಂಡ್ಯದ ಕೆಲವು ತಾಲೂಕುಗಳಲ್ಲಿ ನಿನ್ನೆ ಅಪಾರ ಪ್ರಮಾಣದ ಮಳೆಯಾಗಿದೆ. ತಡವಾಗಿ ಆದರೂ ನಿನ್ನೆ ಧಾರಾಕಾರವಾದ ಮಳೆ ಸುರಿದ ಪರಿಣಾಮ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಇದರಿಂದ ಜನ ತೊಂದರೆಗೆ ಒಳಗಾಗಿದ್ದಾರೆ.

ವರುಣನಾರ್ಭಟಕ್ಕೆ ಮದ್ದೂರು ತತ್ತರ: ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶುಕ್ರವಾರ ಸಂಜೆ ನಿರಂತರವಾಗಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಬಿರುಗಾಳಿ ಮಳೆಗೆ ನಗರಕೆರೆ ಸೇರಿದಂತೆ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ. ಭಾರಿ - ಗಾಳಿ ಮಳೆಗೆ ಅವಾಂತರಗಳು ಕೂಡಾ ಸೃಷ್ಟಿಯಾಗಿವೆ.

ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಈ ಪರಿಣಾಮ ನಗರಕೆರೆ, ಸೋಂಪುರ, ಮಾಲಗಾರನಹಳ್ಳಿ, ಅಜ್ಜಹಳ್ಳಿ, ಕ್ಯಾತಘಟ್ಟ, ಹುಲಿಗೆರೆಪುರ ಸೇರಿದಂತೆ 9 ಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕರೆಂಟ್​ ಇಲ್ಲದೇ ಇರುವುದರಿಂದ ಎಲ್ಲ 9 ಗ್ರಾಮಗಳು ತೀವ್ರ ಅನಾನುಕೂಲವನ್ನು ಎದುರಿಸಬೇಕಾಯಿತು. ಮಳೆಯಿಂದಾಗಿ ಅಲ್ಲಲ್ಲಿ ವಾಹನ ಸಂಚಾರವೂ ಅಸ್ತವ್ಯಸ್ತಗೊಂಡಿದ್ದು ಕಂಡು ಬಂದಿದೆ.

ಮನೆಗಳಿಗೆ ಹಾನಿ: ಇನ್ನು ಕೆಲ ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮನೆಗಳ ಹೆಂಚುಗಳು ಗಾಳಿಗೆ ತೂರಿ ಹೋಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೆಸಗರಹಳ್ಳಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲೂ 15 ಕ್ಕೂ ಹೆಚ್ಚು ತೆಂಗಿನ ಮರ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿರುವ ಬಗ್ಗೆಯೂ ವರದಿಯಾಗಿದೆ. ಸೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ರಸ್ತೆಗೆ ಬಿದ್ದಿರುವ ಕಂಬಗಳ ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಕೆಲವು ಗ್ರಾಮಗಳಿಗೆ 2 ದಿನ ಇಲ್ಲ ಕರೆಂಟ್​: ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ನಗರಕೆರೆ, ಬೆಸಗರಹಳ್ಳಿ ಗ್ರಾಮಗಳಿಗೆ ಎರಡು ದಿನಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ ಎಂದು ಸೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಇದು ಅಲ್ಲಿನ ಗ್ರಾಮಸ್ಥರನ್ನು ಸಂಕಷ್ಟಕ್ಕೆ ದೂಡಿದೆ. ಶೀಘ್ರ ದುರಸ್ತಿ ಕಾರ್ಯ ಕೈಗೊಂಡು ವಿದ್ಯುತ್​ ಸಂಪರ್ಕ ಒದಗಿಸುವಂತೆ ಸ್ಥಳೀಯ ಆಡಳಿತವನ್ನು ಎರಡೂ ಗ್ರಾಮಗಳ ನಾಗರಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್​ ಚಂಡಮಾರುತದಿಂದಾಗಿ ಮಂಗಳೂರಿಗೆ ತಂಪೆರೆದ ಮಳೆರಾಯ; ನಾಳೆ ಕರ್ನಾಟಕಕ್ಕೆ ಮುಂಗಾರು ಆಗಮನ ನಿರೀಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.