ಮಂಡ್ಯ: ಇಂದು ಬೆಳಗ್ಗೆಯಿಂದ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ನಗರದಲ್ಲಿ ಬೆಳಗ್ಗಿನ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಸೈಕ್ಲೋನ್ ಮಾದರಿಯಲ್ಲಿ ಮೋಡ ಮುಚ್ಚಿದ ವಾತಾವರಣ ಎಲ್ಲೆಡೆ ಇದ್ದು, ಜನರು ಚಳಿಯ ವಾತಾವರಣ ಅನುಭವಿಸುತ್ತಿದ್ದಾರೆ. ನಗರದಲ್ಲಿ ಬೆಳಗ್ಗೆ ಆರಂಭವಾದ ಮಳೆ ಬಿಟ್ಟು ಬಿಡದೇ ಸುರಿಯುತ್ತಿದೆ.
ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿಯುತ್ತಿದ್ದು, ವಿವಿ ರಸ್ತೆ, ಆರ್‌ಪಿ ರಸ್ತೆ, ವಿವೇಕಾನಂದ ರಸ್ತೆಯ ಗುಂಡಿಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಗುತ್ತಿದೆ.