ETV Bharat / state

ಮಂಡ್ಯ : ಮಳೆಯ ಆರ್ಭಟಕ್ಕೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ

ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಭಾರೀ ಮಳೆಗೆ ಮರಗಳು ಧರೆಗೆ ಉರುಳಿದ್ದು, ಕೆಲವು ಕಡೆಗಳಲ್ಲಿ ಮನೆಯ ಮೇಲೆ ವಾಹನದ ಮೇಲೆ ಮರಗಳು ಬಿದ್ದು ಹಾನಿ ಸಂಭವಿಸಿರುವುದಾಗಿ ತಿಳಿದು ಬಂದಿದೆ..

heavy-rain-in-mandya-district
ಮಂಡ್ಯ : ಮಳೆಯ ಆರ್ಭಟಕ್ಕೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ
author img

By

Published : May 2, 2022, 11:36 AM IST

ಮಂಡ್ಯ : ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದೆ. ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಕೆ.ಆರ್.ಪೇಟೆ ತಾಲೂಕಿನಲ್ಲಿ ಮಳೆಯ ಆರ್ಭಟಕ್ಕೆ ಮನೆಗಳ ಮೇಲೆ ಮರಗಳು ಬಿದ್ದಿದ್ದು, ಮನೆಗಳು ಸಂಪೂರ್ಣ ಹಾನಿಯಾಗಿವೆ.

ಇಲ್ಲಿನ ಗಂಜಿಗೆರೆ ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಮಂಜುನಾಥ್ ಎಂಬುವರ ಮನೆ ಹಾಗೂ ಕಾರು ಸಂಪೂರ್ಣ ಹಾನಿಯಾಗಿದೆ. ಜೊತೆಗೆ ಸೋಮಶೇಖರ್ ಎಂಬುವರ ಎಲೆಕ್ಟ್ರಿಕ್ ಅಂಗಡಿ ಮಳೆಗೆ ಕುಸಿದು ಬಿದ್ದಿದೆ. ಇದರಿಂದಾಗಿ ನೀರು ನುಗ್ಗಿ ವಿದ್ಯುತ್ ಉಪಕರಣಗಳು ಕೆಟ್ಟು ಲಕ್ಷಾಂತರ ರೂ. ನಷ್ಟ ಉಂಟಾಗಿರುವುದಾಗಿ ಹೇಳಿದ್ದಾರೆ.

heavy-rain-in-mandya-district
ಭಾರೀ ಮಳೆಗೆ ಹಾನಿಗೊಳಗಾದ ಮಂಜುನಾಥ್ ಎಂಬುವರಿಗೆ ಸೇರಿದ ಮನೆ ಮತ್ತು ಕಾರು

ತಗಡೂರು,ಚಿಕ್ಕನಹಳ್ಳಿ ಸೇರಿದಂತೆ ವಿವಿಧ ಕಡೆ ಮನೆಗಳ ಮೇಲ್ಛಾವಣಿ ಕುಸಿದು ಅಪಾರ ನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮದಲ್ಲೂ ಮರಗಳು ನೆಲಕ್ಕುರುಳಿವೆ.

ಇನ್ನು ಪಾಂಡುಪುರ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಬಿದ್ದು, ಬಾಬು ಎಂಬುವರಿಗೆ ಸೇರಿದ ಎಮ್ಮೆ ಮೃತಪಟ್ಟಿದೆ. ರೈತ ಬಾಬು ಪರಿಹಾರ ನೀಡುವಂತೆ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.

heavy-rain-in-mandya-district
ಮನೆ ಮೇಲೆ ಉರುಳಿಬಿದ್ದ ಮರ

ಓದಿ : ವೃದ್ಧೆಯ ತಲೆ ಒಡೆದು ಸರ ದೋಚಿದ ಆರೋಪಿ ಭದ್ರಾವತಿಯಲ್ಲಿ ನೇಣಿಗೆ ಶರಣು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.