ಮಂಡ್ಯ: ಕಳೆದ ಎರಡು ದಿನಗಳಿಂದ ಮತ್ತೆ ಆರ್ಭಟಿಸುತ್ತಿದ್ದು ಮಂಡ್ಯ ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಸುಮಾರು ಐವತ್ತಕ್ಕೂ ಹೆಚ್ಚು ಎಕರೆ ಜಮೀನಿಗೆ ನೀರು ನುಗ್ಗಿದೆ, ಇದರಿಂದಾಗಿ ಈಗಷ್ಟೇ ನಾಟಿ ಮಾಡಿದ ಬೆಳೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ.
ವಿರಿಜಾ ನಲಯ ಎಡದಂಡೆಯನ್ನು ಹಲವು ದಿನಗಳಿಂದ ಸರಿಪಡಿಸದೇ ಇದ್ದಿದ್ದು ಈ ಅವಘಡಕ್ಕೆ ಕಾರಣ ಎಂದು ರೈತರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಶಾಲೆ ಹಾಗೂ ಮನೆಗಳಿಗೆ ನೀರು ನುಗ್ಗಿದ್ದು. ಮನೆಯ ಗೋಡೆಗಳು ಶಿಥಿಲಗೊಂಡಿದೆ.
ಮದ್ದೂರಿನ ಪೂರ್ಣಪ್ರಜ್ಞ ಶಾಲೆಯ ಆವರಣಕ್ಕೆ ನೀರು ನುಗ್ಗಿದ್ದು, ಶಾಲೆಗೆ ತೆರಳು ಮಕ್ಕಳು ಅರಸಹಾಸ ಪಡುತ್ತಿದ್ದಾರೆ. ಇನ್ನು ಮಂಡ್ಯ ತಾಲೂಕು ಬುದನೂರು ಗ್ರಾಮದಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ. ಅದೃಷ್ಟ ವಶಾತ್ ಮನೆಯೊಳಗಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದ್ದೂರು ಪಟ್ಟಣದ ತರಕಾರಿ ಮಾರುಕಟ್ಟೆಗೆ ನೀರು ನುಗ್ಗಿದ್ದು ಅಪಾರ ಪ್ರಮಾಣದ ತರಕಾರಿ ನಾಶವಾಗಿದೆ. ಒಟ್ಟಾರೆ ಹಲವು ದಿನಗಳಿಂದ ಶಾಂತನಾಗಿದ್ದ ವರುಣದೇವ ಮತ್ತೆ ಆರ್ಭಟಿಸುತ್ತಿದ್ದಾನೆ. ಇದರಿಂದಾಗಿ ಜಿಲ್ಲೆಯ ಹಲವು ಕಡೆ ಮತ್ತೆ ಪ್ರವಾಹದ ಪರಿಸ್ಥಿತಿ ಉಂಟಾಗುತ್ತಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಸೆಪ್ಟೆಂಬರ್ 2ರವರೆಗೆ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ